ಜಿಲ್ಲೆ

ಶಂಕರಣ್ಣಗೆ ಕೆಸಿಸಿಐನಿಂದ ಸನ್ಮಾನ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೊದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿರುವ ಶ್ರೀ ಗುರುಸಿದ್ದೇಶ್ವರ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಅವರಿಗೆ ಕರ್ನಾಟಕ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದಕ್ಕೆ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ, ಉಪಾಧ್ಯಕ್ಷ ಸಂದೀಪ ಬಿಡಸಾರಿಯಾ, ಗೌರವ ಕಾರ್ಯದರ್ಶಿ ರವೀಂದ್ರ ಬಳಿಗಾರ ಅವರು ಸಂಸ್ಥೆಯ ಸದಸ್ಯರ ಪರವಾಗಿ ಗೌರವಿಸಿದರು.

ಶಂಕರಣ್ಣ ಮುನವಳ್ಳಿ ಅವರು ವಿಶೇಷವಾಗಿ ಶೈಕ್ಷಣಿಕ, ಸಹಕಾರ, ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ಮಾಡಿದ್ದಾರೆ. ಅಲ್ಲದೇ ಅನೇಕ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡು ಸಾಮಾಜಿಕ ರಂಗದಲ್ಲಿ ಜನಪ್ರಿಯತೆ ಗಳಿಸಿದ್ದಾರೆ.

ಕೆಎಲ್ಇ ಸಂಸ್ಥೆಯ ನಿರ್ದೇಶಕರಾಗಿ, ಗುರುಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ, ಹುಬ್ಬಳ್ಳಿ ಕೋ ಅಪರೇಟಿವ್ ಆಸ್ಪತ್ರೆ ಹೀಗೆ ವಿವಿಧ ಕಡೆಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಿದ್ದಾರೆ.

ತಮ್ಮ ಸಾಮಾಜಿಕ ಸೇವೆಗಾಗಿ ಈಗಾಗಲೇ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಇವರು ಸಹಕಾರಿ ರಂಗದಲ್ಲಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಪ್ರೇರಣೆಯಾಗಲಿ ಎಂದು ಸಂಸ್ಥೆಯ ಪದಾಧಿಕಾರಿಗಳು ಆಶಿಸಿದ್ದಾರೆ.