ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಕೆಎಲ್ಇ 108ನೇ ಸಂಸ್ಥಾಪನ ದಿನ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಡಾ. ಲಿಂಗರಾಜ ಮುಳ್ಳಳ್ಳಿ ಮಾತನಾಡಿ, ಸಂಸ್ಥೆಯ ಉಗಮ ಹಾಗೂ ಇದಕ್ಕೆ ಕಾರಣಕರ್ತರಾದ ಸಪ್ತರ್ಷಿಗಳ ಹಾಗೂ ದಾನಿಗಳ ಬಗ್ಗೆ ವಿವರಿಸಿದರು.
ಉಪನ್ಯಾಸಕ ಡಾ. ಅನಿಲ ಗುಮಗೋಳ ಕಾರ್ಯಕ್ರಮ ನಿರೂಪಿಸಿದರು. ಡಾ. ಜಯಶ್ರೀ ಕುಂದಗೋಳಮಠ, ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.