ಜಿಲ್ಲೆ

ಕಿತ್ತೂರು ರಾಣಿ ಚೆನ್ನಮ್ಮ ಜೀವನ ಚರಿತ್ರೆ ತಿಳಿದುಕೊಳ್ಳಿ

ಮಡಿಕೇರಿ: ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

೧೮೨೪ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಈಗ ೨೦೦ ವ?ರ್ ಆಗಿದೆ. ಚೆನ್ನಮ್ಮ ಜೊತೆ ಸಂಗೊಳ್ಳಿರಾಯಣ್ಣ ಸಹ ಹೋರಾಡಿದ್ದರು. ನಂತರ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಹೋರಾಡಿದ್ದರು. ಪ್ರತಿ ದಿನ ಪ್ರತಿ ಕ್ಷಣ ಅವರ ನೆನಪು ಇರಬೇಕು. ನೆನಪ?್ಟೆ ಅಲ್ಲದೆ ಅವರ ಜೀವನ ಸಂದೇಶವನ್ನು ಪಾಲಿಸಬೇಕು. ಅವರ ಕನಸು ನನಸಾಗುತ್ತದೆ ಎಂದು ಹೇಳಿದರು.

ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ. ಅವರು ದೇಶಕ್ಕೆ ದಿಕ್ಸೂಚಿ ತೋರಿಸಿದ್ದಾರೆ. ಈ ದಿಕ್ಸೂಚಿಯಡಿ ನಾವೆಲ್ಲರೂ ನಡೆಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತ ಎಂಬಂತೆ ಬದುಕು ಹೇಗಿರಬೇಕು ಎಂದರೆ ನಮ್ಮ ಬಗ್ಗೆ ಬೇರೆಯವರು ಬರೆದಿಡಬೇಕು ಎಂದು ತಿಳಿಸಿದರು.

ಧೈಯಂ ಸರ್ವತ್ರ ಸಾಧನಂ ಎಂಬಂತೆ ೧೮೨೪ ರಲ್ಲಿ ಬ್ರಿಟಿಷರ ವಿರುದ್ದ ದೇಶಕ್ಕಾಗಿ ಹೋರಾಡಿದರು. ತೊಟ್ಟಿಲನ್ನು ತೂಗುವ ಕೈ ದೇಶವನ್ನು ಆಳಬಲ್ಲುದು ಎಂಬುದನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ಸಾಬೀತುಪಡಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಅವರು ನಿರಂತರ ಕತ್ತಿವರಸೆ, ಬಿಲ್ಲುಗಾರಿಕೆ ತರಬೇತಿ ಪಡೆದಿದ್ದರು. ನಿರಂತರವಾದ ಒಳ್ಳೆಯ ಅಭ್ಯಾಸಗಳು ನಮ್ಮನ್ನು ಉತ್ತಮಗೊಳಿಸುತ್ತದೆ ಎಂದು ತಿಳಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಅವರ ಸಾಹಸ, ಶೌರ್ಯ, ಧೈರ್ಯ, ದೇಶಪ್ರೇಮದ ಪ್ರತಿರೂಪ. ಕನ್ನಡದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರಂತೆ ಎಲ್ಲರೂ ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.

ಬ್ಲಾಸಂ ಶಾಲೆಯ ಮುಖ್ಯ ಶಿಕ್ಷಕಿ ಅನಸೂಯ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರು ೧೭೭೮ ರ ಅ.೨೩ ರಂದು ಜನಿಸಿದರು. ಪತಿ ಮರಣ ನಂತರ ಕಿತ್ತೂರು ರಾಣಿ ಚೆನ್ನಮ್ಮ ಅವರು ರಾಣಿಯಾಗುತ್ತಾರೆ. ಬ್ರಿಟಿಷರ ವಿರುದ್ದ ಕನ್ನಡದ ಮಹಿಳೆ ಹೋರಾಡಿ ಭಾರತದ ನಾರಿಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಅವರನ್ನು ದೇಶದಾದ್ಯಂತ ಸ್ಮರಿಸುವಂತಾಗಬೇಕು ಎಂದರು.

ಪ್ರಮುಖರಾದ ಅನೂಪ್ ಮಾದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಇತರರು ಪಾಲ್ಗೊಂಡಿದ್ದರು. ಕುಮಾರ್ ಸ್ವಾಗತಿಸಿದರೆ, ಭವ್ಯ ನಿರೂಪಿಸಿ, ಮಣಜೂರು ಮಂಜುನಾಥ್ ವಂದಿಸಿದರು.