ಕಾರ್ಕಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಜ್ಞಾನಾಧಾರಿತ ಶಿಕ್ಷಣ ವ್ಯವಸ್ಥೆಯೊಂದೇ ಸೂಕ್ತ ಮಾರ್ಗ ಎಂದು ನಿಟ್ಟೆ ಸಂಸ್ಥೆಯ ಪ್ರೊ.ಡಾ.ಗೋಪಾಲ ಮುಗೇರಾಯ ಹೇಳಿದರು.
ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಿಷಯದಲ್ಲಿ ಇತ್ತೀಚೆಗೆ ನಡೆದ ಸೆಮಿನಾರ್‌ನಲ್ಲಿ ಮಾತನಾಡಿದರು.
ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎ.ಪಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದ ನಿವೃತ್ತ ಮುಖ್ಯ ಅಧಿಕಾರಿ ಎಂ.ಆರ್.ವಾಸುದೇವ್, ವಕೀಲ ಸುವ್ರತ್ ಕುಮಾರ್, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಂಟ್ ನಿರ್ದೇಶಕ ಡಾ.ಪಿ.ಎಸ್ ಐತಾಳ್, ಪೂರ್ಣಪ್ರಜ್ಞ ಪದವಿ ಕಾಲೇಜು ಪ್ರಾಂಶುಪಾಲ ಡಾ.ರಾಮು ಎಲ್., ಕಾರ್ಯಕ್ರಮ ಸಂಯೋಜಕ ಡಾ.ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕೆಆರ್‌ಎಂಎಸ್‌ಎಸ್ ಮಂಗಳೂರು ವಿಭಾಗ ಕಾರ್ಯದರ್ಶಿ ರಾಜೇಶ್ ಶಿಕ್ಷಕರ ಸಂಘಟನೆ ಕುರಿತು ಮಾಹಿತಿ ನೀಡಿದರು. ಡಾ.ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ಡಾ.ಭೈರವಿ ಪಂಡ್ಯಾ ವಂದಿಸಿದರು. ಜಯಶ್ರೀ ಎ.ನಾಯಕ್ ಕಾರ್ಯಕ್ರಮ ನಿರೂಪಿಸಿದರು.