ಜಿಲ್ಲೆ

ಕರಾಟೆಯಲ್ಲಿ ಕೊಡಗಿನ ಮಕ್ಕಳ ಸಾಧನೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕೊಡಗು ಟ್ರೆಡಿಷನಲ್ ಶೊಟೊಕಾನ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು 3 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.

ಸAಸ್ಥೆಯ ಶರನ್ನಿ ಎ.ಶೆಟ್ಟಿ ಚಿನ್ನ ಹಾಗೂ ಬೆಳ್ಳಿ ಪದಕ, ಸಮನ್ವಿ, ಲಿವಿನ್ ಚಿನ್ನದ ಪದಕ ಹಾಗೂ ಚಿಂತನ್, ಲಿವಿನ್, ಜಸ್ವಿನ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ.