ಮಡಿಕೇರಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಶಾಸಕ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ವ್ಯಕ್ತಪಡಿಸಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್‌ರವರ ನೇತೃತ್ವದಲ್ಲಿ ಆಯೋಜಿಸಿದ್ದ ಸಂತಾಪ ಸಭೆಯಲ್ಲಿ ಧ್ರುವನಾರಾಯಣ್‌ರವರ ಭಾವಚಿತ್ರಕ್ಕೆ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆಯ ಮೂಲಕ ಶಾಂತಿ ಕೋರಿದರು.
ಟಿ.ಪಿರಮೇಶ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಎಚ್.ಎ.ಹಂಸ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಹಿರಿಯ ನಾಯಕ ಧ್ರುವ ನಾರಾಯಣ್ ಅವರ ವ್ಯಕ್ತಿತ್ವದ ಕುರಿತು ಮಾತನಾಡಿದರು.
ಸಭೆಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ, ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಟಿ.ಹೆಚ್.ಉದಯಕುಮಾರ್, ಪ್ರಕಾಶ್ ಆಚಾರ್ಯ, ಜಗದೀಶ್, ಮುದ್ದು ರಾಜು, ಕೆ.ಜಿ.ಪೀಟರ್, ಪ್ರೇಮ ಕೃಷ್ಣಪ್ಪ, ಪ್ರಮುಖರು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಉಪಸ್ಥಿತರಿದ್ದರು.