ಜಿಲ್ಲೆ

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಟಿ.ಪಿ. ರಮೇಶ್ ಆಯ್ಕೆ

reportermys

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶಿಫಾರಸ್ಸಿನೊಂದಿಗೆ ನೇಮಕಾತಿ ಮಾಡಲಾಗಿದೆ.

ರಮೇಶ್ ಕಳೆದ ೧೫ ವರ್ಷಗಳಿಂದ ಕೆಪಿಸಿಸಿ ಸದಸ್ಯರಾಗಿ, ೨ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಪ್ಯಾನಲಿಸ್ಟ್ ಆಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ.