ಜಿಲ್ಲೆ

ಸಾಧಕ ವಿದ್ಯಾರ್ಥಿಗಳು, ಸಾಧನೆಯ ರೂವಾರಿ ಶಿಕ್ಷಕರಿಗೆ ಸನ್ಮಾನ

reportermys

ಮಡಿಕೇರಿ: ಕಳೆದ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಉತ್ತಮ ಫಲಿತಾಂಶಕ್ಕೆ ಕಾರಣಕರ್ತರಾದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿ ತಾಲೂಕು ಘಟಕದಿಂದ ಸನ್ಮಾನಿಸಲಾ ಯಿತು.

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್ ಮಾತನಾಡಿ, ಉತ್ತಮ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಮುಖ್ಯ ಎಂದರು.

ಉದ್ಯಮಿ ವ್ಯಾಂಡಮ್ ದಾಮೋದರ್ ಮಾತನಾಡಿ, ದಿವಾಕರ್ ನೇತೃತ್ವದ ದಲಿತ ಸಂಘರ್ಷ ಸಮಿತಿ ಹಲವು ವರ್ಷದಿಂದ ಬಹಳಷ್ಟು ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂಧು ಮೆಚ್ಚುಗೆ ವ್ಯಕ್ತ ಪಡಿಸಿದರು. ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವುದು ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಹುಮ್ಮಸ್ಸು ಹುಟ್ಟಿಸುತ್ತದೆ ಎಂದು ಹೇಳಿದರು.

ಮುಖ್ಯಭಾಷಣ ಮಾಡಿದ ಶಕ್ತಿ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಮಾತನಾಡಿ, ಯಶಸ್ಸು ಪಡೆಯಬೇಕಾದರೆ ಶ್ರಮ ಪಡಬೇಕಾ ಗುತ್ತದೆ. ಸಾಧನೆಯ ಮೇರುಶಿಖರ ಏರಬೇಕಾದರೆ ಎಲ್ಲರ ಪ್ರೀತಿ, ನಂಬಿಕೆ ಉಳಿಸಿಕೊಳ್ಳಬೇಕೆಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್. ವಿಜಯ ಮಾತನಾಡಿ, ಸರ್ಕಾರಿ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಲು ಗುರುಗಳು ಶಕ್ತಿಮೀರಿ ಪ್ರಯತ್ನಿಸುತ್ತಿದ್ದಾರೆಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ವಿದ್ಯಾಭ್ಯಾಸ ನೀಡಿದ ಶಿಕ್ಷಕರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ ಎಂದರು.

ವೇದಿಕೆಯಲ್ಲಿ ಸ್ಕೌಟ್ ಅಂಡ್ ಗೈಡ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಮುಖ್ಯೋಪಾದ್ಯಾಯರಾದ ಪಿ.ಕೆ. ನಳಿನಿ, ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ದಲಿತ ಸಂಘರ್ಷ ಸಮಿತಿ ಮುಖಂಡ ವೇಲುಸ್ವಾಮಿ, ನಗರ ಸಂಚಾಲಕ ಸಿದ್ದೇಶ್ವರ್, ಪ್ರಥಮ ದರ್ಜೆ ಗುತ್ತಿಗೆದಾರ ವಿಜಯ್ ಮತ್ತಿತರರು ಇದ್ದರು.