ಜಿಲ್ಲೆ

ಕೊಡಗು ವಿವಿ ಸ್ನಾತಕೋತ್ತರ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕೊಡಗು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಉದ್ಯಮ ಸಂಸ್ಥೆಗಳ ಜತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ತಿಳಿಸಿದ್ದಾರೆ.

ಇಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ 90 ಗಂಟೆಗಳ ಕೌಶಲ್ಯ ತರಬೇತಿ ನೀಡಲಾಗಿದೆ. ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳಿಗಾಗಿಯೇ ವೃತ್ತಿ ಜೀವನದ ನಿರೀಕ್ಷೆಗಳಿಗೆ ಪೂರಕವಾಗಿ ವಿಶೇಷ ಒತ್ತು ನೀಡಲಾಗುತ್ತದೆ. ಈಗಾಗಲೇ ಒರೆಕಾಲ್, ಇನ್‌ಟೆಲ್, ಇನ್ಫೋಸಿಸ್ ಮತ್ತು ಎನ್‌ಇಎಫ್ ಪ್ರತಿಷ್ಠಿತ ಸಂಸ್ಥೆಗಳಿAದ ಉಚಿತವಾಗಿ ಉದ್ಯೋಗ ಕೌಶಲ್ಯದ ತರಬೇತಿ ನೀಡುವುದರ ಜತೆಗೆ ಉದ್ಯೋಗವಕಾಶಗಳನ್ನು ಕಲ್ಪಸಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.

ಉನ್ನತ ಶಿಕ್ಷಣದ ಅಧ್ಯಯನಕ್ಕೆ ಆಸಕ್ತಿಯನ್ನು ಹೊಂದಿರುವAತಹ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸುತ್ತಾ, ಆ ಮೂಲಕ ಸ್ನಾತಕೋತ್ತರ ಶಿಕ್ಷಣದ ಮೌಲ್ಯವನ್ನು ಕುರಿತು ಮನವರಿಕೆ ಮಾಡಿಕೊಡಲಾಗುತ್ತಿದ್ದು, 2025-26ನೇ ಸಾಲಿಗೆ ಕೊಡಗು ವಿಶ್ವವಿದ್ಯಾಲಯದಲ್ಲಿ ವಿವಿಧ ಸ್ನಾತಕೋತ್ತರ, ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿ ಸ್ನಾತಕೋತ್ತರ ಶಿಕ್ಷಣಕ್ಕೆ ಸೂಕ್ತ ತಾಣವಾಗಿದ್ದು, ಅನುಭವಿ ಅಧ್ಯಾಪಕರು, 103 ಎಕರೆ ವಿಸ್ತೀರ್ಣದ ಹಸಿರು ತುಂಬಿದ ಕ್ಯಾಂಪಸ್, ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ, ಉತ್ತಮ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಸಿಸಿಟಿವಿ ಮತ್ತು 24/7 ಭದ್ರತೆ, ಕೌಶಲ್ಯ ಅಭಿವೃದ್ಧಿ ಕೋಶ, ತರಬೇತಿ ಮತ್ತು ಉದ್ಯೋಗ ಕೋಶ ಮೊದಲಾದ ಸೌಲಭ್ಯಗಳನ್ನು ಹೊಂದಿದ್ದು, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಸಹ ನಡೆಸಲಾಗುತ್ತದೆ.

ಹಲವಾರು ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗಳಿಗೆ ಸಹಿ ಹಾಕುವ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರುಗಳಿಗೆ ಆ ಸಂಸ್ಥೆಗಳಲ್ಲಿ ಜಂಟಿ ಅಧ್ಯಯನ, ಉನ್ನತ ಶಿಕ್ಷಣ, ತರಬೇತಿ, ಶೈಕ್ಷಣಿಕ ಭೇಟಿ ಹಾಗೂ ವಿಚಾರ ಸಂಕಿರಣ ಹಾಗೂ ಸಮ್ಮೇಳನಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗುವಂತಹ ಯೋಜನೆಗಳನ್ನು ಬಹು ಯಶಸ್ವಿಯಾಗಿ ರೂಪಿಸುತ್ತಾ ಬಂದಿದೆ. ರಾಜ್ಯದ ಇತರೆ ವಿಶ್ವವಿದ್ಯಾಲಯಗಳ ಮತ್ತು ಹೊರ ರಾಜ್ಯದ ವಿದ್ಯಾರ್ಥಿಗಳಿಗೂ ಕೂಡ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ಚಿಕ್ಕಅಳುವಾರದ ಜ್ಞಾನ ಕಾವೇರಿ ಆವರಣ ಮತ್ತು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಸಂಪರ್ಕ ಮಾಡಬಹುದು ಎಂದರು.

ರಿಜಿಸ್ಟಾçರ್ ಸುರೇಶ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇ. ರಾಘವ, ಉಪನ್ಯಾಸಕ ರವಿಶಂಕರ್ ಇದ್ದರು.