ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಕಳೆದೆರಡು ವರ್ಷ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಸಿರುವುದು ತೃಪ್ತಿ ತಂದಿದೆ ಎಂದು ಭನ್ವರ್ ಸಿಂಗ್ ಮೀನಾ ಹೇಳಿದರು.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ವರ್ಗಾವಣೆಯಾಗಿರುವ ಅವರಿಗೆ ಗುರುವಾರ ಜಿಲ್ಲಾ ಪಂಚಾಯಿತಿ, ಪಂಚಾುತಿ ಅಭಿವೃದ್ಧಿ ಅಧಿಕಾರಿ ಗಳ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಪಂಚಾಯಿತಿ ಭವನದಲ್ಲಿ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.
೨ ವರ್ಷ ಸಿಇಒ ಆಗಿ ಕರ್ತವ್ಯ ನಿರ್ವಹಿಸಿರುವುದು ಅವಿಸ್ಮರಣೀಯ. ಉತ್ತಮವಾಗಿ ಕಾರ್ಯನಿರ್ವಸಲು ಸಹಕರಿಸಿದ ಎಲ್ಲಾ ಹಂತದ ಅಧಿಕಾರಿ ಹಾಗೂ ಸಿಬ್ಬಂದಿ ಸಹಕಾರ ಸ್ಮರಣೀಯ. ಕೊಡಗು ಜಿಲ್ಲೆಯಿಂದ ಹಲವು ನೆನಪು ಹೊತ್ತು ಸಾಗುತ್ತಿದ್ದೇನೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆ ಅಭೂತಪೂರ್ವ ಸಾಧನೆ ಮಾಡಿದೆ. ಈ ಸಂಬಂಧ ಹಲವು ಪ್ರಶಸ್ತಿ ಲಭಿಸಿದ್ದು, ಮುಂದೆ ಎಲ್ಲಿಯೇ ಕರ್ತವ್ಯ ನಿರ್ವಹಿಸಿ ದರು ಇವು ನೆನಪಿನಲ್ಲಿ ಉಳಿಯಲಿವೆ. ಡಿಜಿಟಲ್ ಗ್ರಂಥಾಲಯ ನಿರ್ಮಾಣ, ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವುದು ಸ್ಮರಣೀಯ ಕ್ಷಣ ಎಂದರು.
ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಅಭಿವೃದ್ಧಿ ಕಾರ್ಯ ಮುಂದುವರಿಸಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.
ಜಿಪಂ ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಯೋಜನಾ ನಿರ್ದೇಶಕ ಜಗದೀಶ್, ಮಡಿಕೇರಿ ತಾಪಂಇಒ ಶೇಖರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಂಯೋಜಕಿ ಹರ್ಷಿತಾ ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಜಿ.ಧನರಾಜು, ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ವಿರಾಜಪೇಟೆ ತಾಪಂ ಇಒ ಕೋಣಿಯಂಡ ಅಪ್ಪಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ರಮೇಶ್ ಮತ್ತಿತರರು ಇದ್ದರು.