ಆರ್.ಎನ್. ಬಿಂದುಮಣಿ, ಕೊಡಗು ಎಸ್‌ಪಿ 
ಕೊಡಗು

2.692 ಕೆಜಿ ಗಾಂಜಾ ವಶ

ಮಡಿಕೇರಿ:
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ, ಸರಬರಾಜು ಹಾಗೂ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ಒಟ್ಟು 63 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ ಮಾದಕ ವಸ್ತು ಸಾಗಾಣಿಕೆಯ 9 ಪ್ರಕರಣಗಳು ಸೇರಿದ್ದು ಮಾದಕ ವಸ್ತು ಸೇವನೆಯ 54 ಪ್ರಕರಣಗಳು ಒಳಗೊಂಡಿವೆ. ಈ ಎಲ್ಲಾ ಪ್ರಕರಣಗಳಲ್ಲಿ ಒಟ್ಟು 2.692 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಆರ್.ಎನ್. ಬಿಂದುಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.