ಅಜ್ಜಿನಿಕಂಡ ಮಹೇಶ್ ನಾಚಯ್ಯ 
ಕೊಡಗು

2ನೇ ಪುಸ್ತಕ ಪತ್ತಾಯ ಉದ್ಘಾಟನೆ

ಮಡಿಕೇರಿ:
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವಿನೂತನ ಕೊಡವ ಪುಸ್ತಕ ಭಂಡಾರ ಯೋಜನೆಯ ಅಂಗವಾಗಿ ಎರಡನೇ ಪುಸ್ತಕ ಪತ್ತಾಯವನ್ನು ಅರೆಕಾಡುವಿನ ಕೊಡವ ಭವನದಲ್ಲಿ ಉದ್ಘಾಟಿಸಲಾಗುತ್ತಿದೆ. ಶನಿವಾರ (ಫೆ.14) ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಪುಸ್ತಕ ಪತ್ತಾಯ ಉದ್ಘಾಟಿಸುವರು. ಕೊಡವ ಭವನ ಅಧ್ಯಕ್ಷ ಕುಕ್ಕೆರ ಜಯಾ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಎಂಎಲ್‌ಸಿ ಮಂಡೇಪAಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬೆಳೆಗಾರರಾದ ನಡಿಕೇರಿಯಂಡ ಪಿ. ಮೋಹನ್ ಮಾಚಯ್ಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗಾಗಲೇ ವೀರಾಜಪೇಟೆ ಶಾಸಕರೂ ಆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಗೃಹಕಚೇರಿಯಲ್ಲಿ ಮೊದಲು ಕೊಡವ ಪುಸ್ತಕ ಪತ್ತಾಯ ಉದ್ಘಾಟಿಸಲಾಗಿದೆ.