48 ಲಕ್ಷ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾದ ರಸ್ತೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಲೋಕಾರ್ಪಣೆ ಮಾಡಿದರು.  MLA
ಕೊಡಗು

48 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ

ಗೋಣಿಕೊಪ್ಪಲು ಬೈಪಾಸ್ ರಸ್ತೆ ಅಭಿವೃದ್ಧಿ ಪೂರ್ಣ

ಸಿದ್ದಾಪುರ : ಗೋಣಿಕೊಪ್ಪಲು ಭಾಗದ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ಸುಸಜ್ಜಿತ ಬೈಪಾಸ್ ರಸ್ತೆ ಉನ್ನತೀಕರಣ ಕಾಮಗಾರಿ ಪೂರ್ಣಗೊಂಡಿದ್ದು, 48 ಲಕ್ಷ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾದ ರಸ್ತೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಸ್ಥಳೀಯ ನಾಗರಿಕರ ಇಚ್ಛೆಯಂತೆ ರಸ್ತೆ ಉದ್ಘಾಟಿಸಿದ ಶಾಸಕರು, ಹೆಚ್ಚಿನ ವಾಹನ ಸಂಚಾರವಿರುವ ಈ ರಸ್ತೆಯ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲದೆ, ರಸ್ತೆಯ ಅಭಿವೃದ್ಧಿಯು ಸ್ಥಳೀಯ ವ್ಯಾಪಾರ ಚಟುವಟಿಕೆಗಳಿಗೂ ಉತ್ತೇಜನ ನೀಡಲಿದೆ ಎಂದು ಹೇಳಿದರು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ನೂರೇರ ಧನ್ಯ ರವೀಂದ್ರ, ಬ್ಲಾಕ್ ಮಹಿಳಾ ಅಧ್ಯಕ್ಷೆ ಆಶಾ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪ ಪಂಚಾಯಿತಿ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.