ಸುಂಟಿಕೊಪ್ಪದ ಇಮ್ಮಾನುವೆಲ್ ದೇವಾಲಯದಲ್ಲಿ ಆಯೋಜಿಸಿದ್ದ ಮಹಿಳಾ ಕ್ರಿಸ್ಮಸ್ ಆಚರಣೆಯಲ್ಲಿ ವಿವಿಧ ಧರ್ಮಕೇಂದ್ರಗಳ ಮಹಿಳಾ ಸ್ಪರ್ಧಿಗಳೊಂದಿಗೆ ದೇವಾಲಯದ ಧರ್ಮಗರುಗಳು ಹಾಜರಿದ್ದರು.
- ಕ್ರಿಸ್ಮಸ್ ಆಚರಣೆ ಅಂಗವಾಗಿ
- ಕೊಡಗು ವಲಯದ ವಿವಿಧ ದೇವಾಲಯ
- ಇಮ್ಮಾನುವೆಲ್ ದೇವಾಲಯ
ಸುಂಟಿಕೊಪ್ಪ: ಕ್ರಿಸ್ಮಸ್ ಆಚರಣೆ ಅಂಗವಾಗಿ ಕೊಡಗು ವಲಯದ ವಿವಿಧ ದೇವಾಲಯಗಳಿಂದ ಇಲ್ಲಿನ ಇಮ್ಮಾನುವೆಲ್ ದೇವಾಲಯದಲ್ಲಿ ಮಹಿಳಾ ಕ್ರಿಸ್ಮಸ್ ಆಚರಿಸಲಾಯಿತು.
ಸೋಮವಾರಪೇಟೆ, ಕುಶಾಲನಗರ, ಸುಂಟಿಕೊಪ್ಪ, ಮಡಿಕೇರಿ, ಆನಂದಪುರ, ಪಾಲಿಬೆಟ್ಟ ದೇವಾಲಗಳಲ್ಲಿರುವ ಮಹಿಳೆಯರು ಮತ್ತು ಯುವತಿಯರು ಸುಂಟಿಕೊಪ್ಪದ ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ಇಮ್ಮಾನುವೆಲ್ ದೇವಾಲಯದ ಆವರಣದಲ್ಲಿ ಅಯೋಜಿಸಲಾಗಿದ್ದ ಮಹಿಳಾ ಕ್ರಿಸ್ಮಸ್ ಆಚರಣೆಯಲ್ಲಿ ಪ್ರಭು ಕ್ರಿಸ್ತ ಜನನದ ಸಂದೇಶದ ಗಾಯನ ಹಾಗೂ ರೂಪಕಗಳೊಂದಿಗೆ ಕ್ರಿಸ್ತಜಯಂತಿಯ ಸಂದೇಶ ಸಾರಿದರು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಂಗಳೂರು ಪ್ರಾಂತೀಯ ಮಹಿಳಾ ಅಧ್ಯಕ್ಷೆ ಬಾಲಭಾರತಿ, ಮಹಿಳೆಯರು ಒಂದಾಗಿ ಸಮಾರಂಭವನ್ನು ಅಯೋಜಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ಮಹಿಳೆಯರಲ್ಲಿರುವ ಪ್ರತಿಭೆಗಳನ್ನು ಹೊರತರಲು ಸಾಧ್ಯ. ಗ್ರಾಮೀಣ ಪ್ರತಿಭೆಗಳು ಹೊರಬರುವುದರ ಜತೆಗೆ ಬಲಿಷ್ಠರಾಗಬಹುದು ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ಶಾಂತಿ ದೇವಾಲಯದ ಧರ್ಮಗುರು ಮಧುಕಿರಣ್, ಕುಶಾಲನಗದ ಮೆಡಕ್ ದೇವಾಲಯದ ಧರ್ಮಗುರು ಶ್ಯಾಮ್‌ವೆಲ್ ಮನೋಜ್ ಕುಮಾರ್, ಸೋಮವಾರಪೇಟೆ ಸಂತ ಜಾನ್ ದೇವಾಲಯದ ಧರ್ಮಗುರು ಪ್ರಿಯದರ್ಶಿನಿ, ಮಂಗಳೂರು ಪ್ರಾಂತೀಯ ಮಹಿಳಾ ಕಾರ್ಯದರ್ಶಿ ಸುಲೋಚಾನ ನಿರಂಜನ್, ಮಹಿಳಾ ವಲಯಾಧ್ಯಕ್ಷೆ ಅಕ್ಷಜೈಸನ್, ಸುಂಟಿಕೊಪ್ಪ ಇಮ್ಮಾನುವೆಲ್ ದೇವಾಲಯದ ಧರ್ಮಗುರು ಹಾಗೂ ವಲಯ ಅಧ್ಯಕ್ಷ ಜೈಸನ್ ಗೌಡ, ಆನಂದಪುರ ದೇವಾಲಯದ ಧರ್ಮಗುರು ಹಾಗೂ ವಲಯ ಕಾರ್ಯದರ್ಶಿ ಮಿಲನ್ ಚಕ್ರವರ್ತಿ, ಪಾಲಿಬೆಟ್ಟ ದೇವಾಲಯದ ಧರ್ಮಗುರು ಶಶಿಕುಮಾರ್ ಇತರರಿದ್ದರು.