ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು.
ಮಡಿಕೇರಿ: ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಈಚೆಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಕೆ.ಪಿ. ನಿಧಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸ್ಥಳದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಬಿ.ಯು. ಕುಶಾಲಪ್ಪ ಪ್ರಥಮ ಸ್ಥಾನ ಗಳಿಸಿದ್ದು, ಕೆ.ಬಿ. ದರ್ಶನ್ ದ್ವಿತೀಯ ಮತ್ತು ವಿ.ಜಿ. ಶೋಭಿತ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಡಿ.ಬಿ. ಮೌಲ್ಯ, ಎನ್.ಎ. ಮೇಘನಾ, ಟೀನಾ, ಎಂ.ಯು. ಮಯೂರ್ ಉತ್ತಮ ಸಾಧನೆ ಪ್ರದರ್ಶಿಸಿ ಪ್ರಶಸ್ತಿ ಪತ್ರ ಮತ್ತು ಪದಕ ಗಳಿಸಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.