ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪೊನ್ನಂಪೇಟೆ ಸಮೀಪದ ಸರ್ವದೈವತಾ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಕ ವೃಂದ.
- ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟ
- ಕೊಡಗು ಜಿಲ್ಲಾ ಪಂಚಾಯಿತಿ, ವಿರಾಜಪೇಟೆ ತಾಲೂಕು ಶಾಲಾ ಶಿಕ್ಷಣ ಇಲಾಖೆ
ಪೊನ್ನಂಪೇಟೆ: ಕೊಡಗು ಜಿಲ್ಲಾ ಪಂಚಾಯಿತಿ, ವಿರಾಜಪೇಟೆ ತಾಲೂಕು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಸಮೀಪದ ಸರ್ವದೈವತಾ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ವಿವಿಧ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಇದೀಗ ತಾಲೂಕು ಮಟ್ಟದ ಸಮಗ್ರ ಪ್ರಶಸ್ತಿಯನ್ನು ಸತತವಾಗಿ ಎರಡನೇ ಬಾರಿಗೆ ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಶಿಕ್ಷಕ ವೃಂದ ಅಭಿನಂದಿಸಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್‌ಗೌಡ ತಿಳಿಸಿದ್ದಾರೆ.