ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅಧ್ಯಕ್ಷತೆಯಲ್ಲಿ ನಡೆದ 2026-27ನೇ ಸಾಲಿನ ಕರಡು ವಾರ್ಷಿಕ ಅಭಿವೃದ್ಧಿ ಯೋಜನೆ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಕರಡು ವಾರ್ಷಿಕ ಅಭಿವೃದ್ಧಿ ಯೋಜನೆ ಸಭೆ ಮಂಗಳವಾರ (ಜ.20) ನಡೆಯಿತು. ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಸುಮಾರು 1,271.91 ಕೋಟಿ ರೂ. ಕ್ರಿಯಾಯೋಜನೆಯನ್ನು ಈ ಸಭೆಯಲ್ಲಿ ಮಂಡಿಸಲಾಯಿತು.
ಇದಕ್ಕೂ ಮೊದಲು ಮುಂದಿನ ಆರ್ಥಿಕ ವರ್ಷದ ವಿವಿಧ ಇಲಾಖೆಗಳ ವಾರ್ಷಿಕ ಅಭಿವೃದ್ಧಿ ಕ್ರಿಯಾಯೋಜನೆ ಸಂಬAಧ ಸುದೀರ್ಘ ಚರ್ಚೆ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವ ಎನ್.ಎಸ್. ಬೋಸರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಚರ್ಚಿಸಿದ ನಂತರ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ನಡೆಸಿ ಸಲಹಾ ಸಮಿತಿಯಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆಯುವಂತೆ ನಿರ್ದೇಶನ ನೀಡಿದ್ದಾರೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು ಕಟ್ಟಡ, ಸರ್ಕಾರಿ ಕಚೇರಿ ಕಟ್ಟಡಗಳ ಅಭಿವೃದ್ಧಿ ಹಾಗೂ ಅಗತ್ಯವಿರುವ ಕಡೆ ಸಾರ್ವಜನಿಕ ಆಸ್ಪತ್ರೆ ಹಾಗೂ ಪಶು ಆಸ್ಪತ್ರೆ ನಿರ್ಮಾಣ, ಸಾರಿಗೆ ಸಂಪರ್ಕ, ವಿದ್ಯಾರ್ಥಿ ನಿಲಯಗಳ ಆರಂಭ, ವಸತಿ ಯೋಜನೆ, ಹೀಗೆ ಹಲವು ಅಭಿವೃದ್ಧಿ ಕೆಲಸಗಳ ಸಂಬAಧ ಕ್ರೀಯಾಯೋಜನೆ ತಯಾರಿಸಿ ನಿಖರ ಮಾಹಿತಿ ಒದಗಿಸಬೇಕು.
ಜಿಲ್ಲೆಯ ಅಭಿವೃದ್ಧಿ ಮತ್ತು ಆಗಬೇಕಿರುವ ಕೆಲಸಗಳ ಸಂಬAಧ ಕ್ರಿಯಾಯೋಜನೆ ತಯಾರಿಸಿ ಬೆಳಕು ಚೆಲ್ಲುವಂತಾಗಬೇಕು. ಈ ಸಂಬAಧ ಸರ್ಕಾರದ ಹಂತದಲ್ಲಿ ಅನುದಾನ ಬಿಡುಗಡೆಗೆ ಆಗಲಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಇಲಾಖೆಗಳು ಆದ್ಯತೆ ಮೇಲೆ ಕಾರ್ಯಕ್ರಮ ರೂಪಿಸಬೇಕು. ಎಲ್ಲರೂ ಒಳಗೊಳ್ಳುವಂತೆ ಇರಬೇಕು. ಸಾರ್ವಜನಿಕರಿಗೆ ಸ್ಪಂದನೆ ಅತೀ ಮುಖ್ಯ. ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿದ್ಯುತ್ ಉಪ ಕೇಂದ್ರಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕೊಡಗು ಜಿಲ್ಲೆಗೆ ಉತ್ತಮ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತಾಗಬೇಕು, ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ಮುಂದಿನ ಆರ್ಥಿಕ ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳ ಸಂಬAಧ ಯಾವ ರೀತಿ ಯೋಜನೆ ರೂಪಿಸಬೇಕು ಎಂಬ ಬಗ್ಗೆ ಸ್ಪಷ್ಟತೆ ಇರಬೇಕು. ರಸ್ತೆ, ಸೇತುವೆ, ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಖರ ಅಂಕಿ ಅಂಶ ಒದಗಿಸಬೇಕು. ಜಿಲ್ಲೆಯಲ್ಲಿ ಪಡಿತರ ಚೀಟಿಗೆ ಸಂಬAಧಿಸಿದAತೆ ಬಡ ಕುಟುಂಬಗಳಿಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗಿದ್ದಲ್ಲಿ ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಕ್ರಿಯಾಯೋಜನೆ ತಯಾರಿಸುವ ಸಂಬAಧ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುವಂತಾಗಬೇಕು. ಸರ್ಕಾರದ ಯೋಜನೆಗಳು ವೈಜ್ಞಾನಿಕವಾಗಿರಬೇಕು. ಸಾರ್ವಜನಿಕವಾಗಿರಬೇಕು. ಎಲ್ಲರಿಗೂ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ವರದಿ ಕ್ರಿಯಾಯೋಜನೆ ರೂಪಿಸಬೇಕು ಎಂದರು.
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ ಪಡಿತರ ಚೀಟಿಗೆ ಸಂಬAಧಿಸಿದAತೆ ಇತ್ತೀಚೆಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗಿರುವ ಕಾರ್ಡುಗಳನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ತಾಲೂಕುವಾರು ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಸರಿಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕರಡು ಅಭಿವೃದ್ಧಿ ಯೋಜನೆಗಳನ್ನು ಕ್ರೋಢೀಕರಿಸಲು ಜಿಲ್ಲಾ ಹಂತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಯೋಜನಾ ಸಮಿತಿಯನ್ನು ಸರ್ಕಾರ ರಚಿಸಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಯೋಜನಾ ಸಮಿತಿ ಸದಸ್ಯ ರಾಜೇಶ್ ಯಲ್ಲಪ್ಪ, ಬಾಲಕೃಷ್ಣ ನಾಯರ್, ಮನ್ಸೂರ್, ಎಸ್‌ಪಿ ಆರ್.ಎನ್. ಬಿಂದುಮಣಿ, ಕೊಲ್ಲಿರ ಬೋಪಣ್ಣ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸಲಹೆಗಳನ್ನು ನೀಡಿದರು. ಜಿಲ್ಲೆಯ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.