ಕಣಿವೆ ಗ್ರಾಮದ ಪಡಿತರ ಅಂಗಡಿಯಲ್ಲಿ ಪಡಿತರ ಪಡೆಯಲು ನಿಂತಿರುವ ಪಡಿತರ ಚೀಟಿದಾರರು 
ಕೊಡಗು

ಪಡಿತರ ವಿತರಣೆಯಲ್ಲಿ ವಿಳಂಬ ಆರೋಪ

ಕುಶಾಲನಗರ:
ಕುಶಾಲನಗರ ತಾಲೂಕು ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳ ಪಡಿತರ ಅಂಗಡಿಗಳಲ್ಲಿ ಪಡಿತರ ವಸ್ತುಗಳ ವಿತರಣೆ ಸಂಧರ್ಭದಲ್ಲಿ ಸರ್ವರ್ ಸಮಸ್ಯೆ ಕಂಡುಬರುತ್ತಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಪಡಿತರ ವಸ್ತುಗಳ ವಿತರಣೆಯಲ್ಲಿ ವಿಳಂಬ, ಗ್ರಾಹಕರ ಪರದಾಟ ತಾಲೂಕು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಕಂಡುಬರುತ್ತಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ತಿಂಗಳ ಮೂರನೇ ವಾರದಲ್ಲಿ ಪಡಿತರ ಅಂಗಡಿಯಲ್ಲಿ ವಸ್ತುಗಳ ವಿತರಣಾ ಕಾರ್ಯ ನಡೆಯುತ್ತಿದ್ದರೂ ಸಮರ್ಪಕವಾದ ಸರ್ವರ್ ಇಲ್ಲದೆ ಪಡಿತರ ಚೀಟಿದಾರರ ಹೆಬ್ಬೆರಳಿನ ಗುರುತು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ತೊಂದರೆಗಳು ಅಗುತ್ತಿವೆ. ಗ್ರಾಮಾಂತರ ಪ್ರದೇಶದ ಜನರು ಕೂಲಿ ಕಾರ್ಮಿಕರಾಗಿದ್ದು, ಕಳೆದ ಮೂರು ದಿನಗಳಿಂದ ತಮ್ಮ ಕೆಲಸವನ್ನು ಬಿಟ್ಟು ಅಲೆಯುವಂತಾಗಿದೆ. ಸಂಬAಧಿಸಿದ ಇಲಾಖೆ ಸಮರ್ಪಕವಾಗಿ ಸ್ಪಂದಿಸುವAತೆ ಕಣಿವೆ, ಹುಲುಸೆ, ಹೆಬ್ಬಾಲೆ, ಶಿರಂಗಾಲ, ತೊರೆನೂರು ವ್ಯಾಪ್ತಿಯ ಸಾರ್ವಜನಿಕರು ಒತ್ತಾಯಿಸಿದ್ದಾರೆ.