ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಆಚರಿಸಲಾಯಿತು. ಹೆಚ್.ಎಂ. ವೆಂಕಟೇಶ್, ಸಿ.ಎಂ. ಬಬಿತಾ, ಕುಮಾರ್, ವಂಜಮ್ಮ ಇದ್ದರು. 
ಕೊಡಗು

ಹೆಬ್ಬಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಮಡಿಕೇರಿ:
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನವನ್ನು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಸಂಭ್ರಮದಿAದ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಹೆಚ್.ಎಂ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸಿ.ಎಂ. ಬಬಿತಾ ದನದ ಮಹತ್ವದ ಬಗ್ಗೆ ಮಾತನಾಡಿ ಅಂಬೇಡ್ಕರ್ ವಿಚಾರಧಾರೆಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ಇದಕ್ಕೂ ಮೊದಲು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನಕ ಬ್ಲಾಕ್‌ನ ಕುಮಾರ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಇದೇ ಸಂದರ್ಭ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸ್ಪಂದನಾ ಮತ್ತು ಹರ್ಷಿತಾ ಅವರಿಗೆ ನೆನಪಿನ ಕಾಣಿಕೆ, ನಗದು ಬಹುಮಾನ ನೀಡಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ವಂಜಮ್ಮ, ಶಾಲಾ ಮಕ್ಕಳು ಇದ್ದರು.