ಸುದ್ದಿಗೋಷ್ಠಿಯಲ್ಲಿ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಮಾತನಾಡಿದರು.
- ಡಿ.೨೩ರಿಂದ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ
ಮಡಿಕೇರಿ: ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಡಿ.೨೩ರಿಂದ ಆರಂಭವಾಗಲಿದೆ ಎಂದು ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ತಿಳಿಸಿದ್ದಾರೆ.
ಕಟ್ಟೆಮಾಡು ಗ್ರಾಮದಲ್ಲಿರುವ ಮಹದೇಶ್ವರ ಕ್ಷೇತ್ರದಲ್ಲಿ ಡಿ.೨೩ರಿಂದ ಡಿ.೨೮ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವ ಪ್ರಯುಕ್ತ ಧಾರ್ಮಿಕ ವಿಧಿವಿಧಾನಗಳು ಸುಸೂತ್ರವಾಗಿ ನಡೆಸಲು ಆಡಳಿತ ಮಂಡಳಿ ಸಭೆಯಲ್ಲಿ ಕೆಲವು ತೀರ್ಮಾನ ಕೈಗೊಳ್ಳಲಾಗಿದೆ. ಜಾತ್ರಾ ಮಹೋತ್ಸವ ದಿನಗಳಂದು ದೇವಾಲಯದ ಆಡಳಿತ ಮಂಡಳಿ ಸೇರಿದಂತೆ ಎಲ್ಲರಿಗೂ ಪ್ರವೇಶ ದ್ವಾರದವರೆಗೆ ಮಾತ್ರ ಪ್ರವೇಶವಿದೆ. ಜಾತ್ರಾ ಮಹೋತ್ಸವ ಕಳೆದ ನಂತರ ಯತಾಸ್ಥಿತಿಯಲ್ಲಿ ದೇವಾಲಯದ ಪ್ರವೇಶ ಇರಲಿದೆ ಎಂದು ತಿಳಿಸಿದ್ದಾರೆ.
ಡಿ.೨೩ರಿಂದ ೨೮ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಇರಲಿದೆ. ಮಧ್ಯಾಹ್ನ ಮಹಾಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದೇವಾಲಯ ಆಡಳಿತ ಮಂಡಳಿ ಕಾರ್ಯದರ್ಶಿ ಕಾಶಿ ಕಾರ್ಯಪ್ಪ, ಸದಸ್ಯರಾದ ಗಣಪತಿ, ಮಹೇಶ್, ದೇವಪ್ಪ, ವೇಣುಗೋಪಾಲ್ ಇದ್ದರು.