ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವದ ಅಂಗವಾಗಿ ಗ್ರಾಮಸ್ಥರಿಂದ ಸಾಂಪ್ರದಾಯಿಕ ಬೊಳಕಾಟ್ ಪ್ರದರ್ಶನ ನಡೆಯಿತು.
ಸೋಮವಾರಪೇಟೆ: ತಾಲೂಕಿನ ಮಾದಾಪುರ ಸಮೀಪದ ಗರ್ವಾಲೆ ಗ್ರಾಮದಲ್ಲಿ ಇತ್ತೀಚೆಗೆ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.
ಬೆಳಗ್ಗೆ ಗರ್ವಾಲೆ ಗ್ರಾಮದ ಓಡಿಯಂಡ ಕುಟುಂಬದ ಮನೆಯಿಂದ ದೇವರ ಭಂಡಾರ ತಂದು ಪೂಜೆ, ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ವಿವಿಧ ಪೂಜಾ ಕೈಂಕರ್ಯ ನಡೆಯಿತು. ಗ್ರಾಮಸ್ಥರಿಂದ ಸಾಂಪ್ರದಾಯಿಕ ಬೊಳಕಾಟ್ ನೃತ್ಯ ಪ್ರದರ್ಶನ ನಡೆಯಿತು. ದೇವಸ್ಥಾನ ಸಮಿತಿಯಿಂದ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆ ಕಲ್ಪಿಸಲಾಗಿತ್ತು.
ತಕ್ಕ ಮುಖ್ಯಸ್ಥರಾದ ಸೋಮಯ್ಯ, ಐಮುಡಿಯಂಡ ಭೀಮಯ್ಯ, ಆರುಡ ರಾಜಪ್ಪ, ತಾಚಮಂಡ ಈರಪ್ಪ, ಪಾಸುರ ಗಣಪತಿ ನೇತೃತ್ವದಲ್ಲಿ ಸಾಂಪ್ರದಾಯಿಕ ಆಚರಣೆಗಳು ನಡೆದವು.