ಶಫೀಕ್ 
ಕೊಡಗು

ಎಂಡಿಎ0ಎ ಮಾರಾಟ ಮಾಡುತ್ತಿದ್ದಾತನ ಬಂಧನ

ಮಡಿಕೇರಿ:
ಕುಶಾಲನಗರದ ಹಳೇ ಮಾರ್ಕೇಟ್ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲೂಕು ಮಾದಾಪುರ ನಿವಾಸಿ ಶಫೀಕ್ (27) ಬಂಧಿತ ಆರೋಪಿ. ಸಾರ್ವಜನಿಕರಿಂದ ಬಂದ ದೂರಿನನ್ವಯ ಖಚಿತ ಮಾಹಿತಿ ಮೇರೆಗೆ ಭಾನುವಾರ (ಸೆ.6) ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 14 ಗ್ರಾಂ ಎಂಡಿಎAಎ, ಕೃತ್ಯಕ್ಕೆ ಬಳಸಿದ ಒಂದು ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಬಂಧಿತನ ವಿರುದ್ಧ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೋಮವಾರಪೇಟೆ ಉಪವಿಭಾಗದ ಡಿಎಸ್‌ಪಿ ಚಂದ್ರಶೇಖರ್, ಕುಶಾಲನಗರ ಟೌನ್ ಇನ್‌ಸ್ಪೆಕ್ಟರ್ ಬಿ.ಆರ್. ಪ್ರದೀಪ್, ಪಿಎಸ್‌ಐ ಎಚ್.ಟಿ. ಗೀತಾ ಹಾಗೂ ಸಿಬ್ಬಂದಿ ಒಳಗೊಂಡ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಪ್ರಕರಣ ಬೇಧಿಸಿದ್ದಾರೆ.
ಮಾದಕ ವಸ್ತುಗಳ ಬಳಕೆಯಾಗಲಿ ಅಥವಾ ಮಾರಾಟವಾಗಲಿ ಕಂಡುಬAದಲ್ಲಿ ಸಾರ್ವಜನಿಕರು ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಮಾಹಿತಿ ನೀಡುವಂತೆ ಎಸ್‌ಪಿ ಆರ್.ಎನ್. ಬಿಂದುಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.