ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ಇಗ್ಗುತ್ತಪ್ಪ ದೇವಾಲಯ ದಲ್ಲಿ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು.
ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ವಿವಿಧ ಪೂಜಾ ವಿಧಿವಿಧಾನ ನೆರವೇರಿದವು.
ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ಪ್ರಾರಂಭಗೊಂಡ ಹೋಮ, ಹವನ ಮುಂದುವರಿದ ಭಾಗವಾಗಿ ಗುರುವಾರ ಬೆಳಗ್ಗೆ ಗಣಪತಿ ಹೋಮ, ಅಂಕುರ ಪೂಜೆ, ಬಿಂಬಶುದ್ಧಿ ಕಲಶ ಪೂಜೆ, ಕಲಶಾಭಿಷೇಕ ಪ್ರಾಯಶ್ಚಿತ ಹೋಮಗಳು ನಡೆದವು. ಮಧ್ಯಾಹ್ನ ವಿಶೇಷ ಪೂಜಾ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ರಾತ್ರಿ ಅಂಕುರ ಪೂಜೆ ಹಾಗೂ ದುರ್ಗಾ ನಮಸ್ಕಾರ ಪೂಜೆ ನೆರವೇರಿತು.
ಶುಕ್ರವಾರ ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ ಅಂಕುರ ಪೂಜೆ, ಶಾಂತಿ ಹೋಮ, ಹೋಮ ಕಲಶಾಭಿಷೇಕ, ಮಧ್ಯಾಹ್ನ ಪೂಜೆ ಹಾಗೂ ರಾತ್ರಿ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ನಡೆಯಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ, ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.