ಸುಂಟಿಕೊಪ್ಪದ ವಾಹನ ಚಾಲಕರ ಮತ್ತು ಆಟೋ ಚಾಲಕ ಸಂಘದ ನಿಲ್ದಾಣದ ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
- ಶಾಸಕ ಡಾ.ಮಂತರ್‌ಗೌಡ ಮಾಹಿತಿ
- ಸುಂಟಿಕೊಪ್ಪದಲ್ಲಿ ಭೂಮಿ ಪೂಜೆ
ಸುಂಟಿಕೊಪ್ಪ: ಹೋಬಳಿಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ತಂದು ಹಂತ ಹಂತವಾಗಿ ಕಾಮಗಾರಿ ಆರಂಭಿಸುವುದಾಗಿ ಶಾಸಕ ಡಾ.ಮಂತರ್‌ಗೌಡ ಭರವಸೆ ನೀಡಿದರು.
ಸುಂಟಿಕೊಪ್ಪದ ವಾಹನ ಹಾಗೂ ಆಟೋ ನಿಲ್ದಾಣದ ಛಾವಣಿ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
40 ಲಕ್ಷ ರೂ.ವೆಚ್ಚದಲ್ಲಿ ಛಾವಣಿ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದು, ಅನುದಾನ ಸಾಲದಿದ್ದರೆ ಮತ್ತಷ್ಟು ಅನುದಾನ ನೀಡಲಾಗುವುದು. ಗ್ರಾಮ ಪಂಚಾಯಿತಿ ವತಿಯಿಂದ ನೂತನ ಮಾರುಕಟ್ಟೆ ನಿರ್ಮಿಸುವ ಬಗ್ಗೆ ಅಗತ್ಯ ಕ್ರಮಗೊಳ್ಳಲಾಗಿದೆ. ಹಳೇ ಮಾರುಕಟ್ಟೆ ಸ್ಥಳವನ್ನು ಬಸ್ ನಿಲ್ದಾಣವಾಗಿ ಪರಿವರ್ತಿಸಬಹುದು ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಕೆ.ವಿ.ಕಿಟ್ಟಣ್ಣ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ರಫೀಕ್‌ಖಾನ್, ಆಟೋ ಚಾಲಕರ ಅಧ್ಯಕ್ಷ ಶರೀಫ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಶಿವಮ್ಮ ಮಹೇಶ್, ಪಂಚಾಯಿತಿ ಅಭಿವೃದ್ಧಿ ವಿ.ಜಿ.ಲೋಕೇಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಮಣಿ, ಕಾಂಗ್ರೆಸ್ ಮುಖಂಡ ಯಂಕನ ಶ್ರೀರಾಮ್, ಕಾನ್‌ಬೈಲ್ ಕಾಂಗ್ರೆಸ್ ಅಧ್ಯಕ್ಷ ಆದಂ ಇತರರು ಇದ್ದರು.