ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಪ್ರಶಸ್ತಿ ಪಡೆದುಕೊಂಡ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಜತೆಗೆ ಶಿಕ್ಷಕರು ಇದ್ದರು.
- ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿ
ನಾಪೋಕ್ಲು: ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡರು.
ಸಮೀಪದ ಮೂರ್ನಾಡು ಪ್ರೌಢಶಾಲೆ ಆಟದ ಮೈದಾನದಲ್ಲಿ ಚೆನಂಡ ಕುಟುಂಬಸ್ಥರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 5-1 ಗೋಲುಗಳ ಅಂತರದಿಂದ ಜಯಗಳಿಸಿ ಪ್ರಶಸ್ತಿ ಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ .