ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಂಟಿಕೊಪ್ಪ ಪಟ್ಟಣದಲ್ಲಿ ಸಂತ ಮೇರಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಭಿತ್ತಿ ಪತ್ರಗಳನ್ನು ಹಿಡಿದು ಜಾಗೃತಿ ಜಾಥಾ ನಡೆಸಿದರು.
ಸುಂಟಿಕೊಪ್ಪ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದಲ್ಲಿ ಸಂತ ಮೇರಿ ಶಿಕ್ಷಣ ಸಂಸ್ಥೆ ವತಿಯಿಂದ ಜಾಗೃತಿ ಜಾಥಾ ನಡೆಸಲಾಯಿತು. ಸಂತಮೇರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ರೀತಿಯ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳುವ ಮೂಲಕ ಜಲಮೂಲ, ಮರ, ಜೀವ ಸಂಕುಲಗಳನ್ನು ಸಂರಕ್ಷಿಸುವ ಮೂಲಕ ಪರಿಸರವನ್ನು ಬೆಳೆಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭ ಸಂತ ಮೇರಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಸೇಲ್ವರಾಜ್ ಮತ್ತು ಸಹಶಿಕ್ಷಕರು ಇದ್ದರು.