ಅರಣ್ಯ ಪರಿಸರ ಸಂರಕ್ಷಣೆ, ಉರುಳು ಬಳಕೆ ವಿರೋಧಿ ಅಭಿಯಾನ ಹಾಗೂ ಕಾಳ್ಗಿಚ್ಚು ತಡೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಲ್ದಾರೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಿದ್ದಾಪುರ: ಅರಣ್ಯ ಪರಿಸರ ಸಂರಕ್ಷಣೆ, ಉರುಳು (ಬೋನು) ಬಳಕೆ ವಿರೋಧಿ ಅಭಿಯಾನ ಹಾಗೂ ಕಾಳ್ಗಿಚ್ಚು ತಡೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಲ್ದಾರೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿರಾಜಪೇಟೆ ವಿಭಾಗದ ತಿತಿಮತಿ ವಲಯ ಅರಣ್ಯ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಶ್ರೀ ಗಂಗಾಧರ ಹಾಗೂ ಉಪ ವಲಯ ಅರಣ್ಯಾಧಿಕಾರಿ ಶಶಿ ಟಿ ಭಾಗವಹಿಸಿ ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಕಾಳ್ಗಿಚ್ಚುಗಳಿಂದ ಅರಣ್ಯ ಹಾಗೂ ವನ್ಯಜೀವಿಗಳಿಗೆ ಉಂಟಾಗುವ ಹಾನಿ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು.
ಪೊನ್ನಂಪೇಟೆ ಗಿರೀಶ್ ಕಲಾ ತಂಡದ ಕಲಾವಿದರು ಪರಿಸರ ಸಂರಕ್ಷಣೆ, ಕಾಳ್ಗಿಚ್ಚು ತಡೆ ಮತ್ತು ಅರಣ್ಯ ನಾಶದ ದುಷ್ಪರಿಣಾಮಗಳನ್ನು ಒಳಗೊಂಡ ಸಂದೇಶಾತ್ಮಕ ಬೀದಿ ನಾಟಕ ಹಾಗೂ ನೃತ್ಯ ಕಾರ್ಯಕ್ರಮವನ್ನು ಪ್ರದರ್ಶಿಸಿ ವಿದ್ಯಾರ್ಥಿಗಳ ಗಮನ ಸೆಳೆದರು.