ಮಡಿಕೇರಿ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ದೈವಜ್ಞ ದರ್ಶನ ಕಾರ್ಯಕ್ರಮದಲ್ಲಿ ಹೊನ್ನಾವರದ ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಸಭಾ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಕಿರಿಯ ಸ್ವಾಮೀಜಿ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಹಾಗೂ ಭಕ್ತರು ಇದ್ದರು.
ಜಾತಿ, ಮತ, ಪಂಥ ಪಂಗಡದ ಭೇದವಿಲ್ಲದೆ ಎಲ್ಲರೂ ಸತ್ಪçಜೆಗಳಾಗಿ ಬಾಳುವ ಮೂಲಕ ಎಲ್ಲರಿಗೂ ಮಾದರಿಯಾಗಿರೋಣ ಎಂದು ಹೊನ್ನಾವರದ ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಸಭಾ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು. ಇಲ್ಲಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ದೈವಜ್ಞ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.