ಮಡಿಕೇರಿ ಮೈತ್ರಿ ಪೊಲೀಸ್ ಸಮುದಾಯ ಭವನದ ಸಮೀಪ ನೂತನ ಪೊಲೀಸ್ ವಸತಿ ಗೃಹ ಕಟ್ಟಡದ ನಿರ್ಮಾಣ ಕಾರ್ಯಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಭೂಮಿಪೂಜೆ ನೆರವೇರಿಸಿದರು. ಡಾ. ಮಂತರ್ ಗೌಡ, ಸಿ.ಎಸ್. ಅರುಣ್ ಮಾಚಯ್ಯ, ಪಿ. ಕಲಾವತಿ, ಟಿ.ಎಂ. ಧರ್ಮಜ ಉತ್ತಪ್ಪ, ಅಪ್ಪಣ್ಣ, ಎಸ್.ಜೆ. ಸೋಮಶೇಖರ್, ಆನಂದ್ ಪ್ರಕಾಶ್ ಮೀನಾ, ಆರ್.ಎನ್. ಬಿಂದುಮಣಿ ಮತ್ತಿತರರು ಈ ಸಂದರ್ಭ ಇದ್ದರು. 
ಕೊಡಗು

ಪೊಲೀಸ್ ವಸತಿಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

ಮಡಿಕೇರಿ:
ಇಲ್ಲಿನ ಮೈತ್ರಿ ಪೊಲೀಸ್ ಸಮುದಾಯ ಭವನದ ಸಮೀಪ ನೂತನ ಪೊಲೀಸ್ ವಸತಿ ಗೃಹ ಕಟ್ಟಡದ ನಿರ್ಮಾಣ ಕಾರ್ಯಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೋಮವಾರ ಭೂಮಿಪೂಜೆ ನೆರವೇರಿಸಿದರು. ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕರ್ನಾಟಕ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಟಿ.ಎಂ. ಧರ್ಮಜ ಉತ್ತಪ್ಪ, ನಗರಸಭೆ ಸದಸ್ಯ ಅಪ್ಪಣ್ಣ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್.ಪಿ. ಆರ್.ಎನ್. ಬಿಂದುಮಣಿ ಮತ್ತಿತರರು ಈ ಸಂದರ್ಭ ಇದ್ದರು.
ಪೊಲೀಸ್ ಗೃಹ-2025 ಯೋಜನೆಯ 5 ನೇ ಹಂತದ ಭಾಗವಾಗಿ ಈ ವಸತಿ ಗೃಹ ನಿರ್ಮಾಣ ಆಗುತ್ತಿದೆ. 2 ಬಿಹೆಚ್‌ಕೆ 12 ಸಂಖ್ಯೆಯ ಸಿಬ್ಬಂದಿ ವಸತಿ ಗೃಹ ಮತ್ತು 6 ಸಂಖ್ಯೆಯ ಅಧಿಕಾರಿಗಳ ನೂತನ ಪೊಲೀಸ್ ವಸತಿ ಗೃಹ ಕಟ್ಟಡವನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ನಿರ್ಮಿಸಲಾಗುತ್ತಿದೆ. ಇದು ಒಟ್ಟು 5.30 ಕೊಟಿ ರೂ. ಮೊತ್ತದ ಯೋಜನೆಯಾಗಿದ್ದು 11 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.