ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿರ್ಮಿಸಲಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಪಿ. ಕಲಾವತಿ, ಮಹೇಶ್ ಜೈನಿ, ರಾಜೇಶ್ ಯಲ್ಲಪ್ಪ, ಅನಿತಾ ಪೂವಯ್ಯ, ಸತೀಶ್, ಕೆ.ಎಸ್. ರಮೇಶ್, ಟಿ.ಪಿ ರಮೇಶ್, ಜಯಪ್ಪ ಹಾನಗಲ್, ಸಿ.ಜೆ. ಮೋಹನ್ ಮೌರ್ಯ ಮತ್ತಿತರರು ಇದ್ದರು. 
ಕೊಡಗು

ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಭೂಮಿಪೂಜೆ

ಮಡಿಕೇರಿ:
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಕರ್ಷಣೀಯ ಪ್ರತಿಮೆ ಸ್ಥಾಪನೆ ನಿಟ್ಟಿನಲ್ಲಿ ಎಲ್ಲಾ ಸಹಕಾರ ನೀಡಲಾಗುವುದು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಇಲ್ಲಿನ ಸುದರ್ಶನ ವೃತ್ತದ ಬಳಿ 44.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸಂವಿಧಾನ ರಚನೆಕಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ರಾಜ್ಯದ ಎಲ್ಲಾ ಜಿಲ್ಲೆಗಳ ಕೇಂದ್ರ ಸ್ಥಾನದಲ್ಲಿ ಇದ್ದರೂ ಮಡಿಕೇರಿಯಲ್ಲಿ ಪ್ರತಿಮೆ ಇರಲಿಲ್ಲ. ಹಾಗಾಗಿ ಇಲ್ಲಿ ಅಂಬೇಡ್ಕರ್ ಪ್ರತಿಮೆ ಬೇಕು ಎನ್ನುವುದು ಹಲವು ದಶಕಗಳ ಬೇಡಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ನಗರ ಸಭೆ ವತಿಯಿಂದ ಈ ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಂಬAಧ ವರ್ಷದ ಜನವರಿಯಲ್ಲಿ ನಿರ್ಣಯ ತೆಗೆದುಕೊಂಡು 20 ಲಕ್ಷ ರೂ. ಮಿಸಲಿಡಲಾಗಿತ್ತು. ಇದಕ್ಕೆ ತಗಲುವ ಹೆಚ್ಚುವರಿ ಮೊತ್ತವನ್ನು ಶಾಸಕರ ನಿಧಿಯಿಂದ ಭರಿಸಲಾಗುವುದು.
ಕಾಮಗಾರಿ ಚುರುಕಾಗಿ ನಡೆಯಬೇಕಿದೆ. ಗುಣಮಟ್ಟದಿಂದಲೂ ಕೂಡಿರಬೇಕಿದೆ. ಈ ನಿಟ್ಟಿನಲ್ಲಿ ಡಾ. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯ ಜವಾಬ್ದಾರಿಯೂ ಹೆಚ್ಚು ಇದ್ದು, ಮುತುವರ್ಜಿ ವಹಿಸುವ ಅಗತ್ಯವಿದೆ. ಮುಂದಿನ ವರ್ಷದ ಏ.15ರ ಒಳಗೆ ಪ್ರತಿಮೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಅನಾವರಣಗೊಳಿಸುವ ಗುರಿಯೊಂದಿಗೆ ಕೆಲಸ ಆಗಬೇಕು. ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾಚರಣ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಿಂದ ಸಂಭ್ರಮದೊAದಿಗೆ ಆಚರಿಸುವಂತಾಗಬೇಕು. ಕೇವಲ ದಲಿತ ಸಂಘಟನೆಗಳು ಮಾತ್ರವಲ್ಲದೆ ಎಲ್ಲರೂ ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಮುಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯರಾದ ಸತೀಶ್, ಕೆ.ಎಸ್. ರಮೇಶ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷ ಜಯಪ್ಪ ಹಾನಗಲ್, ಪ್ರಧಾನ ಕಾರ್ಯದರ್ಶಿ ಸಿ.ಜೆ. ಮೋಹನ್ ಮೌರ್ಯ, ಗೌರವಾಧ್ಯಕ್ಷ ಹೆಚ್.ಎಲ್. ದಿವಾಕರ್, ಉಪಾಧ್ಯಕ್ಷ ದಿಲೀಪ್ ಕುಮಾರ್, ಖಜಾಂಚಿ ಪ್ರೇಮಾ ಕೃಷ್ಣಪ್ಪ, ವಕ್ತಾರ ವಿನಯ್ ಸಿಪಿಟಿ ಮತ್ತಿತರರು ಇದ್ದರು.