ಕುಶಾಲನಗರ ಚಿಕ್ಕಣ್ಣ ಬಡಾವಣೆಯಲ್ಲಿ 2.04 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಅರುಣ್ ಮಾಚಯ್ಯ, ಆರ್.ಎನ್. ಬಿಂದುಮಣಿ, ವಿ.ಪಿ. ಶಶಿಧರ್, ಪ್ರಮೋದ್ ಮುತ್ತಪ್ಪ ಮತ್ತಿತರರು ಇದ್ದರು.
ಸಂಚಾರಿ ಸುವ್ಯವಸ್ಥೆ, ಸುರಕ್ಷತೆ ನಿಟ್ಟಿನಲ್ಲಿ ಪೊಲೀಸರು ಪ್ರತಿದಿನವೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಇಲ್ಲಿನ ಹಳೇ ಮಾರುಕಟ್ಟೆ ರಸ್ತೆಯ ಚಿಕ್ಕಣ್ಣ ಬಡಾವಣೆಯಲ್ಲಿ 2.04 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ತಾಲೂಕು ಕೇಂದ್ರ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಂಚಾರಿ ಸುವ್ಯವಸ್ಥೆಯೊಂದಿಗೆ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಚಾರಿ ಪೊಲೀಸ್ ಠಾಣೆಗಳು ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಠಾಣೆಯ ಆವರಣದಲ್ಲಿ ನಿಲ್ಲಿಸುವ ಮೂಲಕ ಗುಜರಿ ವಾತಾವರಣ ಸೃಷ್ಠಿಸದಂತೆ ನಿರ್ವಹಣೆ ಮಾಡಬೇಕು. ಬಡಾವಣೆಯವರಿಗೆ ಅನಾನುಕೂಲ ಉಂಟಾಗದAತೆ ಎಚ್ಚರವಹಿಸಬೇಕು. ನಾಗರಿಕರು ಕೂಡ ಕಾನೂನು ಪಾಲನೆ ಮಾಡಲು ಸಹಕಾರ ನೀಡಬೇಕು ಎಂದರು.
ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಮಾತನಾಡಿ ನೂತನ ಎಸ್ಪಿ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿರುವುದು ಶ್ಲಾಘನೀಯ ವಿಚಾರ ಎಂದರು.
ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕುಶಾಲನಗರ ತಾಲೂಕು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅದಕ್ಕೆ ಪೂರಕವಾಗಿ ಹೊಸ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಶಾಸಕರ ಕಾಳಜಿ ಹೆಚ್ಚಿನದ್ದಾಗಿದೆ. ಸರ್ಕಾರಿ ಯೋಜನೆ, ವಿವಿಧ ಇಲಾಖೆ ಕಚೇರಿಗಳಿಗೆ ನಾಗರಿಕ ಸೌಲಭ್ಯಕ್ಕೆ ನಿವೇಶನ ಸಾಕಾಗುತ್ತಿಲ್ಲ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಪರಭಾರೆಯಾಗಿರುವ ಸರ್ಕಾರಿ ಜಾಗದ ಸಂರಕ್ಷಣೆ ಅಗತ್ಯವಿದೆ ಎಂದು ಹೇಳಿದರು.
ಕುಶಾಲನಗರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ ಇಂದಿನ ಜನಸ್ನೇಹಿ ಪೊಲೀಸರಿಂದ ಸ್ಥಳೀಯರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ, ಬದಲಾಗಿ ಹೆಚ್ಚಿನ ಸುರಕ್ಷತೆ ದೊರಕಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾತನಾಡಿ 2.04 ಕೋಟಿ ರೂ. ಅನುದಾನದಲ್ಲಿ ನೂತನ ಸಂಚಾರಿ ಠಾಣೆ ನಿರ್ಮಾಣವಾಗಲಿದ್ದು, ಇದರಿಂದ ಸಂಚಾರಿ ಪೊಲೀಸ್ ಠಾಣೆ ಪ್ರತ್ಯೇಕ ಕಟ್ಟಡದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ. ಈ ಕಟ್ಟಡ ಕಾಮಗಾರಿ ಬೇಗ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳ್ಳಲಿ ಎಂದು ಹೇಳಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು ಮಾತನಾಡಿ, ಕುಶಾಲನಗರ ತಾಲೂಕಿಗೆ ಸುಸಜ್ಜಿತ ಒಳಾಂಗಣ, ಹೊರಾಂಗಣ ಕ್ರೀಡಾಂಗಣದ ಅಗತ್ಯವಿದ್ದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಈ ಬೇಡಿಕೆಗಳನ್ನು ಈಡೇರಿಸಿ ಕೊಡಬೇಕು ಎಂದು
ವಿನಂತಿಸಿಕೊAಡರು. ಪೊಲೀಸ್ ಇಲಾಖೆಗೆ ಸಂಬAಧಿಸಿದAತೆ ವಿವಿಧ ಯೋಜನೆಗಳು, ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಸೋಮಶೇಖರ್, ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ತಹಸೀಲ್ದಾರ್ ಕಿರಣ್ ಜಿ ಗೌರಯ್ಯ, ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಪ್ರದೀಪ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಸದಸ್ಯ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪೊಲೀಸ್ ಠಾಣಾಧಿಕಾರಿಗಳು, ಸಿಬ್ಬಂದಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.