ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು. ನಾರಾಯಣ, ನಿತಿನ್ ಚಕ್ಕಿ, ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು. 
ಕೊಡಗು

ಜನನ ಮತ್ತು ಮರಣ ನಿಖರವಾಗಿ ದಾಖಲಿಸಬೇಕು

ಮಡಿಕೇರಿ:
ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟçದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ಅನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಈ ಕಾರ್ಯ ಆಗಬೇಕು. ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ 2015 ರ ಏಪ್ರಿಲ್, 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾAಶದ ಮೂಲಕ ಆನ್‌ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಈ ಕಾರ್ಯದ ಪ್ರಗತಿಯನ್ನು ಸಾಧಿಸಬೇಕು. ಜನನ ಮತ್ತು ಮರಣ ನೋಂದಣಿ ಸಂಬAಧಿಸಿದAತೆ ಆಯಾಯ ಕಾಲದಲ್ಲಿ ಪಡೆಯುವಂತಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಆಯಾಯ ಕಾಲದಲ್ಲಿಯೇ ಪಡೆದುಕೊಳ್ಳುವಂತಾಗಬೇಕು. ಈಗಾಗಲೇ ಜನನ ಮತ್ತು ಮರಣ ನೋಂದಣಿಯನ್ನು ಗ್ರಾ.ಪಂ.ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಆ ನಿಟ್ಟಿನಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ 30 ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. 30 ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು 30 ದಿನದೊಳಗೆ ಇ-ಜನ್ಮ ತಂತ್ರಾAಶದಲ್ಲಿ ದಾಖಲು ಮಾಡಬೇಕು. ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು 2022 ರ ಸೆಕ್ಷನ್ 40 ಮತ್ತು 48 ರಂತೆ ತಿದ್ದುಪಡಿ ಮಾಡಲಾಗಿದ್ದು, ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ. ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ. ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
ಜಿಲ್ಲಾ ಸಾಂಖ್ಯಿಕ ಇಲಾಖೆ ಅಧಿಕಾರಿ ನಾರಾಯಣ ಮಾತನಾಡಿ ಜನನ ಮತ್ತು ಮರಣವನ್ನು ವಿವಿಧ ಹಂತದಲ್ಲಿ ದಾಖಲಿಸಲಾಗುತ್ತದೆ.2025 ರ ಜನವರಿ, 01 ರಿಂದ ನವೆಂಬರ್ ಅಂತ್ಯದ ವರೆಗೆ ಕೊಡಗು ಜಿಲ್ಲೆಯಲ್ಲಿ ಒಟ್ಟು ಗ್ರಾಮೀಣ ಪ್ರದೇಶದಲ್ಲಿ 330 ಮತ್ತು ನಗರ ಪ್ರದೇಶದಲ್ಲಿ 8 ಒಟ್ಟು 338 ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ. ಈ ಅವಧಿಯಲ್ಲಿ 2963 ಗಂಡು, 2907 ಹೆಣ್ಣು ಒಟ್ಟು 5,870 ಮಕ್ಕಳ ಜನನವಾಗಿದೆ. ಹಾಗೆಯೇ ಮರಣ ಪ್ರಮಾಣ 2539 ಗಂಡು, 1734 ಹೆಣ್ಣು ಒಟ್ಟು 4,283 ಮಂದಿ ಮೃತಪಟ್ಟಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನನ ಮರಣ ಉಪ ನೋಂದಣಿ ಘಟಕವನ್ನು ಸ್ಥಾಪಿಸಿ ಈ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿ, ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಘಟನೆಗಳನ್ನು 21 ದಿನದೊಳಗೆ ನೋಂದಣಿ ಮಾಡಲು ಅನುಕೂಲವಾಗುವಂತೆ ಸಂಬAಧಿಸಿದ ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಬಿ.ಎಂ.ಗಾನವಿ ಇತರರು ಇದ್ದರು.