ಶನಿವಾರಸಂತೆಯ ಖಾಸಗಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕೊಡಗು ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟನೆ ಸಂದರ್ಭ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಯದುವೀರ್, ಅಪ್ಪಚ್ಚು ರಂಜನ್, ಬೋಪಯ್ಯ, ಸುಜಾ ಕುಶಾಲಪ್ಪ, ಡಾ.ನವೀನ್ ಕುಮಾರ್, ರವಿ ಕಾಳಪ್ಪ, ಬಿ.ಬಿ. ಭಾರತೀಶ್, ರೀನಾ ಪ್ರಕಾಶ್ ಇತರರು ಇದ್ದರು. 
ಕೊಡಗು

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ

ಎ. ಆರ್. ರಘುರಾಮ
ಶನಿವಾರಸಂತೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಧ್ಯಕ್ಷ ಬಿ. ವೈ. ವಿಜಯೇಂದ್ರ ದೂರಿದರು.
ಶನಿವಾರಸಂತೆ ಖಾಸಗಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿ ಕೊಡಗು ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ದುರಾಡಳಿತ ನಿಂತಿಲ್ಲ.
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅವರೇ ದೊಡ್ಡ ಭ್ರಷ್ಟರಾಗಿದ್ದಾರೆಂದು ಆರೋಪಿಸಿದರು.
ಇಲ್ಲಿಯವರೆಗೆ ಅಧಿಕಾರ ಪಡೆಯಲು ಹೋರಾಟ ಮಾಡಿದ ಶಿವಕುಮಾರ್ ಇದೀಗ ಅಧಿಕಾರ ಉಳಿಸಿಕೊಳ್ಳಲು ಹೊರಟ ಮಾಡಬೇಕಿದೆ.ಯಾವಾಗ ಬೇಕಾದರೂ ಕಾಂಗ್ರೆಸ್ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿ ಆಯ್ಕೆ ಆಗಬಹುದು ಎಂದು ಅವರು ವ್ಯಂಗ್ಯವಾಡಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಲು ಪೇಮೆಂಟ್ ಕೋಟಾ ಮತ್ತು ಮ್ಯಾನೇಜ್ ಮೆಂಟ್ ಕೋಟಾ ಇದೆ. ಈಗಾಗಲೇ ಅನೇಕ ಶಾಸಕರು ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ
ಲಾಬಿ ಮಾಡುತ್ತಿದ್ದಾರೆ. ಇವುಗಳ ನಡುವೆ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳನ್ನು ಅಪೇಕ್ಷಿಸಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಸಂಘಟನೆಯಲ್ಲಿ ಕೊಡಗು ಮಾದರಿಯಾಗಬೇಕು. ಈ ಹಿಂದೆ ನಡೆದಿರುವ ಸಣ್ಣಪುಟ್ಟ ಲೋಪಗಳಿಂದ ನಾವು ಜಿಲ್ಲೆಯ 2 ಕ್ಷೇತ್ರವನ್ನು ಕಳೆದುಕೊಂಡಿದ್ದೇವೆ. ಮುಂದಿನ ಚುನಾವಣೆಯಲ್ಲಿ
ಎರಡೂ ಕ್ಷೇತ್ರ ಬಿಜೆಪಿಗೆ ದೊರಕುವಂತೆ ಕಾರ್ಯನಿರ್ವಹಿಸಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಸಂಸದ ಯದುವೀರ್ ಕೃಷ್ಣ ದತ್ತ ಒಡೆಯರ್ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ.
ಅವುಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಲ ವಾಗಿದೆ
ಎಂದು ಆಪಾದಿಸಿದರು. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯವಸ್ಥಿತ ಹೊರಟ ರೂಪಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.
ಮುಂಬರುವ ಎಲ್ಲ ಚುನಾವಣೆಗಳನ್ನೂ ಪಕ್ಷದ ಕಾರ್ಯಕರ್ತರು ಸವಾಲಾಗಿ ಸ್ವೀಕಾರ ಮಾಡಬೇಕು. ಬಿಜೆಪಿಗೆ ಹೆಚ್ಚು ಸ್ಥಾನ ದೊರಕಿಸಿಕೊಡುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮುಖಂಡರಾದ ಡಾ.ನವೀನ್ ಕುಮಾರ್, ಎಸ್. ಜಿ. ಮೇದಪ್ಪ, ಬಿ.ಬಿ. ಭಾರತೀಶ್, ರೀನಾ ಪ್ರಕಾಶ್, ಲೋಕೇಶ್ ಮುಂತಾದವರಿದ್ದರು.