ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್‌ಗೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಲಾಯಿತು. ಎಸ್.ಪವಿತ್ರ., ಧನಲಕ್ಷ್ಮಿ(ಪೊನ್ನು), ಶ್ರೀಮತಿ ಬಂಗೇರ, ರೇವತಿ ರಮೇಶ್ ಇತರರಿದ್ದರು. 
ಕೊಡಗು

ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ

ಆದರ್ಶ್. ಎಂ.ಕೆ.

ಪ್ರಮುಖ ಮುಖ್ಯಾಂಶಗಳು

  • ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ
ಮಡಿಕೇರಿ: ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್‌ನ ಮೊದಲ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಹಿಳಾ ಘಟಕವನ್ನು ಮತ್ತಷ್ಟು ಸದೃಢಗೊಳಿಸಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳಾ ಘಟಕ ಪ್ರಮುಖ ಪಾತ್ರ ವಹಿಸಬೇಕು. ಎಲ್ಲಾ ವಾರ್ಡ್‌ಗಳಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸಬೇಕು ಎಂದು ಕರೆ ನೀಡಿದರು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಮಹಿಳಾ ಘಟಕ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಮಹಿಳಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಪಕ್ಷದ ಬಲವರ್ಧನೆಗೆ ಎಲ್ಲಾ ಮಹಿಳಾ ಕಾರ್ಯಕರ್ತರು ಕೈಜೋಡಿಸಬೇಕು. ಮುಂಬರುವ ಚುನಾವಣೆಗಳಲ್ಲಿ ಮಹಿಳಾ ಶಕ್ತಿಯ ಮೂಲಕ ಜಯಗಳಿಸಬೇಕು, ಸರಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ನೂತನ ಪದಾಧಿಕಾರಿಗಳ ಆಯ್ಕೆ: ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಗರ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಪವಿತ್ರ., ಉಪಾಧ್ಯಕ್ಷರಾಗಿ ಧನಲಕ್ಷ್ಮಿ(ಪೊನ್ನು), ಶ್ರೀಮತಿ ಬಂಗೇರ, ರೇವತಿ ರಮೇಶ್, ತಾಜುನ್ನಿಸ, ಹರಿಣಾಕ್ಷಿ, ಕಾರ್ಯದರ್ಶಿಯಾಗಿ ಕೆ.ಎಸ್.ಕುಸುಮ, ರೈಸಾಖಾನಂ, ಸುನಂದ, ವಿಮಲ, ಪ್ರೇಮ ನಿಂಗಪ್ಪ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮುಮ್ತಾಜ್ ಬೇಗಂ ಆಯ್ಕೆಯಾದರು.
ಸಭೆಯಲ್ಲಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಜುಲೇಕಾಬಿ, ಲೀಲಾ ಶೇಷಮ್ಮ, ಫರಿದಾ ಬಾನು, ಗಾಯತ್ರಿ, ಕುಸುಮ ಯಾಲದಾಳು, ಸರೋಜ, ಶಾಂತಿ, ಫಾತಿಮಾ ಪ್ರಧಾನ ಕಾರ್ಯದರ್ಶಿಗಳಾದ ಕೋಚನ ಚೇತನ್, ಸಂಪತ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.