ಕುಶಾಲನಗರದಲ್ಲಿ ನಡೆಯಲಿರುವ ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಕುಶಾಲನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು. ಎಚ್.ಬಿ. ಚಂದ್ರಪ್ಪ, ಶಾಂಬಶಿವಯ್ಯ, ಕೆ.ಎಸ್. ಮೂರ್ತಿ, ಹಕ್ಕೆ ಮೋಹನ್ ಮತ್ತಿತರರು ಇದ್ದರು. 
ಕೊಡಗು

ಪ್ರಚಾರ ರಥಕ್ಕೆ ಚಾಲನೆ

ಸುನಿಲ್ ಪೊನ್ನೇಟಿ
ಕುಶಾಲನಗರ:
ಕುಶಾಲನಗರದಲ್ಲಿ ಜೂ. 23ರಂದು ನಡೆಯಲಿರುವ ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಪ್ರಚಾರ ರಥವನ್ನು ಕುಶಾಲನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಶುಕ್ರವಾರ ಮುಂಜಾನೆ ಚಾಲನೆಗೊಳಿಸಲಾಯಿತು.
ಕುಶಾಲನಗರದ ಎಪಿಸಿಎಂಎಸ್ ಅಧ್ಯಕ್ಷ ಎಚ್.ಬಿ. ಚಂದ್ರಪ್ಪ ಮತ್ತು ಕೊಡಗು ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಾಂಬಶಿವಯ್ಯ ಪ್ರಚಾರ ರಥಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಎಚ್.ಬಿ. ಚಂದ್ರಪ್ಪ ಕುಶಾಲನಗರದಲ್ಲಿ ನಡೆಯುತ್ತಿರುವ ಜಿಲ್ಲೆಯ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ಅಭೂತಪೂರ್ವವಾಗಿ ಹಾಗೂ ಅರ್ಥಪೂರ್ಣವಾಗಿ ಸಂಘಟಿಸುವ ಸಲುವಾಗಿ ಜಿಲ್ಲೆಯಾದ್ಯಂತ ಪ್ರಚಾರ ರಥ ಸಾಗಲಿದೆ. ಈ ಸಂದರ್ಭ ಭಕ್ತ ಜನ ಹಾಗೂ ಸಾರ್ವಜನಿಕರಿಗೆ ಸಮ್ಮೇಳನ ಬಗ್ಗೆ ಮಾಹಿತಿ ಕೊಡಲಾಗುವುದು ಎಂದರು.
ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ.ಎಸ್. ಮೂರ್ತಿ, ಯುವ ಘಟಕದ ಅಧ್ಯಕ್ಷ ಹಕ್ಕೆ ಮೋಹನ್, ಸಮ್ಮೇಳನ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್. ನಂದೀಶ್, ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬಿ. ನಟರಾಜು, ತೊರೆನೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಟಿ. ಬಿ. ಜಗದೀಶ್, ಉದ್ಯಮಿಗಳಾದ ಗೋಣಿಮರೂರು ನವೀನ್, ಬಿ. ಎನ್. ಶ್ರೀಧರ್, ಕಣಿವೆ ಲೋಕೇಶ್, ತೊರೆನೂರು ಗಣೇಶ್ ಇದ್ದರು.