ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಆದ ನಿರ್ದೇಶಕರು. ಮಮತಾ, ಪವಿತ್ರ, ರತ್ನ, ಜ್ಯೋತಿ, ಕಮಲ ಮತ್ತಿತರರು ಇದ್ದಾರೆ.
- ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ
ಕುಶಾಲನಗರ: ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಭಾನುವಾರ ನಡೆಯಿತು. 9 ನಿರ್ದೇಶಕ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. 40 ಮತದಾರರ ಪೈಕಿ ಎಲ್ಲರೂ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು.
ಸಾಮಾನ್ಯ ಕ್ಷೇತ್ರದಿಂದ ಮಮತಾ, ಪವಿತ್ರಾ, ರತ್ನ್ನಾ, ಜ್ಯೋತಿ, ಕಮಲಾ, , ರೇಣುಕಾ, ಮಂದಾಕಿನಿ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಲತಾ ಅಯ್ಕೆ ಆಗಿದ್ದಾರೆ. ಚುನಾವಣಾ ಪ್ರಕ್ರಿಯೆ ಆರಂಭವಾದ ನಂತರದಲ್ಲಿ ಬಿ.ಸಿ.ಎಂ.ಎ. ಕ್ಷೇತ್ರದಿಂದ ಜಯಶ್ರೀ ಮತ್ತು ಎಸ್.ಟಿ. ವಿಭಾಗದಿಂದ ಲಕ್ಷ್ಮೀ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯದರ್ಶಿ ಸುಮಾ ಕಾರ್ಯ ನಿರ್ವಹಿಸಿದರು.