ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ 40 ಅಡಿ ಕಂದಕಕ್ಕೆ ಉರುಳಿದ್ದ ಕಾರು
ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ ಗುರುವಾರ ಕಾರೊಂದು 40 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಕಡಂಗದಿAದ ಮೂರ್ನಾಡು ಮಾರ್ಗವಾಗಿ ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಈ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಈ ಸಂದರ್ಭ ಕಾರಿನಲ್ಲಿ ಚಾಲಕ ತಮ್ಮಯ್ಯ (60) ಮಾತ್ರ ಇದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ. ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.