ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವೃತ್ತಿ ಮಾರ್ಗದರ್ಶನ ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ಕುರಿತು ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು. ಹೇಮಂತ್ ಕುಮಾರ್, ವಿಶ್ವೇಶ್ವರ ಭಟ್, ಎಂ. ಈಶ್ವರ ಭಟ್, ಬಿ.ಎಂ. ಸೋಮಣ್ಣ, ಸಿ.ಜಿ. ಮಂದಪ್ಪ ಇದ್ದರು. 
ಕೊಡಗು

ಚೆನ್ನಮ್ಮ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

ಮಡಿಕೇರಿ:
ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಮಡಿಕೇರಿಯ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ಕುರಿತು ಕಾರ್ಯಗಾರ ಗುರುವಾರ ನಡೆಯಿತು.
ಪಿಯುಸಿ ನಂತರದ ಶಿಕ್ಷಣದ ಕುರಿತಾಗಿ ವೃತ್ತಿ ಮಾರ್ಗದರ್ಶನ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪುತ್ತೂರಿನ ಅಕ್ಷರ ಚಾರಿಟೇಬಲ್ ಟ್ರಸ್ಟ್ ಪ್ರೋಜೆಕ್ಟ್ ಮ್ಯಾನೇಜರ್ ಹೇಮಂತ್ ಕುಮಾರ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ವಿಶ್ವೇಶ್ವರ ಭಟ್ ಪರೀಕ್ಷಾ ಸಿದ್ಧತೆ ಕುರಿತು ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಸಮಾರಂಭದಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ಪ್ರಾಜೆಕ್ಟ್ ಸೆಕ್ರೆಟರಿ ರತನ್ ತಮ್ಮಯ್ಯ ಮಾತನಾಡಿ, ಗ್ರಾಮೀಣ ಶಾಲಾ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವ ಗುರಿ ಹೊಂದುವAತಗಾಬೇಕು ಎಂದು ಸ್ಫೂರ್ತಿದಾಯಕ ಉದಾಹರಣೆಗಳೊಂದಿಗೆ ಕರೆ ನೀಡಿದರು.
ಮಡಿಕೇರಿ ರೋಟರಿ ಸದಸ್ಯ ಎಂ. ಈಶ್ವರ ಭಟ್, ರೋಟರಿ ಮಡಿಕೇರಿ ಕಾರ್ಯದರ್ಶಿ ಬಿ.ಎಂ. ಸೋಮಣ್ಣ, ಪ್ರಾಂಶುಪಾಲ ಸಿ.ಜಿ. ಮಂದಪ್ಪ ಇದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊAಡರು.