ಸೋಮವಾರಪೇಟೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ಜೆಸಿಐ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಅಧ್ಯಕ್ಷೆ ಮಂಜುಳಾ ಸುಬ್ರಮಣಿ ಉದ್ಘಾಟಿಸಿದರು. ಮಿಲ್ಡ್ರಿ ಡ್ ಗೋನ್ಸಾಲ್ವೇಸ್, ಅರುಣ್, ಜಗದಾಂಭ, ಜ್ಯೋತಿ ಇದ್ದರು. 
ಕೊಡಗು

ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಕಿರಣ್ ಗೌಡ.ಜಿ
ಸೋಮವಾರಪೇಟೆ: ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಶನಿವಾರ ಕುವೆಂಪು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಬೆಂಗಳೂರು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಪ್ಲೇಸ್‌ಮೆಂಟ್ ಸೆಲ್ ಮತ್ತು ಸಿಎಸ್‌ಆರ್ ರಾಜ್ಯ ನೋಡಲ್ ನಿವೃತ್ತ ಅಧಿಕಾರಿ ಪ್ರೊ.ಎ.ನಾರಾಯಣ ಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಉನ್ನತ ಶಿಕ್ಷಣ, ವಿವಿಧ ವೃತ್ತಿ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಕೌಶಲಾಭಿವೃದ್ಧಿ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಜೆಸಿಐ ಅಧ್ಯಕ್ಷೆ ಮಂಜುಳಾ ಸುಬ್ರಮಣಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೇಸ್, ಪ್ರಾಜೆಕ್ಟ್ ಡೈರೆಕ್ಟರ್ ಬಿ.ಇ.ಅರುಣ್ ಕುಮಾರ್, ಜೆಸಿಐ ಸ್ಥಾಪಕ ಅಧ್ಯಕ್ಷ ಕೆ.ಎನ್.ತೇಜಸ್ವಿ, ಕಾರ್ಯದರ್ಶಿ ಜ್ಯೋತಿ ರಾಜೇಶ್ ಹಾಗೂ ನಿಕಟಪೂರ್ವ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್ ಇದ್ದರು.