ಸಿದ್ದಾಪುರ-ನೆಲ್ಯಹುದಿಕೇರಿ ಮುಖ್ಯರಸ್ತೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿರುವುದು.
ಸಿದ್ದಾಪುರ: ಸಿದ್ದಾಪುರ-ನೆಲ್ಯಹುದಿಕೇರಿ ಮುಖ್ಯರಸ್ತೆಯಲ್ಲಿ ಮಂಗಳವಾರ ರಸ್ತೆ ಗುಂಡಿಯನ್ನು ತಪ್ಪಿಸಲು ಯತ್ನಿಸಿದ ವೇಳೆ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಜಖಂಗೊಂಡಿವೆ. ವಾಹನಗಳಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಪರಿಣಾಮ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮಾಹಿತಿ ತಿಳಿದ ತಕ್ಷಣ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಚಾರ ಸುಗಮಗೊಳಿಸಿದರು.
ಮುಖ್ಯರಸ್ತೆಯಲ್ಲಿನ ಗುಂಡಿಗಳೇ ಅಪಘಾತಕ್ಕೆ ಕಾರಣವಾಗಿದ್ದು, ರಸ್ತೆ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಸಾರ್ವಜನಿಕರು ಸಂಬಂಧಿಸಿದ ಇಲಾಖೆಯನ್ನು ಒತ್ತಾಯಿಸಿದ್ದಾರೆ.