ಮಡಿಕೇರಿ ಸಮೀಪದ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. 
ಕೊಡಗು

ಕ್ಲೋಸ್‌ಬರ್ನ್ ಶಾಲಾ ವಾರ್ಷಿಕೋತ್ಸವ

ಸುನಿಲ್ ಪೊನ್ನೇಟಿ
ಮಡಿಕೇರಿ:
ಸಮೀಪದ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು ಈಚೆಗೆ ಸಂಭ್ರಮದಿAದ ಆಚರಿಸಲಾಯಿತು.
ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು.
ಎಸ್‌ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ ಪುಟಾಣಿಗಳು, ಸಾರ್ವಜನಿಕರು, ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಗ್ರಾಪಂ ಸದಸ್ಯೆ ಪ್ರಭಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ, ಕೆ.ಎಫ್. ಜೆಸ್ಸಿ, ಪಿ.ಸಿ. ಉಷಾ, ಪ್ರಜ್ಞಾ, ಪೋಷಕರು, ಹಳೇ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.