ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಸೋಮವಾರ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು. ಎನ್.ಯು.ನಾಚಪ್ಪ, ಬಿ.ಎಂ.ಪಾರ್ವತಿ, ಕುಶ, ಮನೋಜ್ ಮಂದಣ್ಣ ಇದ್ದರು. 
ಕೊಡಗು

ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಸಿಎನ್‌ಸಿ ಪುಷ್ಪನಮನ

ಮಡಿಕೇರಿ: ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು.
ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ, ವೆನಿಸ್ ಚಾರ್ಟರ್ ೧೯೬೪ರ ವಿಧಿ ೭ ಮತ್ತು ಭಾರತೀಯ ಸಂವಿಧಾನದ ವಿಧಿ ೪೯ರ ಅಡಿಯಲ್ಲಿ ದೇವಟ್ ಪರಂಬ್ ಹತ್ಯಾಕಾಂಡ ಸ್ಥಳದಲ್ಲಿ ಅಂತಾರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯಾಕಾಂಡ ಸ್ಮಾರಕವನ್ನು ಸ್ಥಾಪಿಸಬೇಕು. ದೇವಟ್ ಪರಂಬ್ ದುರಂತ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಹತ್ಯಾಕಾಂಡ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ಸೂಕ್ಷ್ಮ, ಏಕ-ಜನಾಂಗೀಯ, ಆದಿಮಸಂಜಾತ, ಅನಿಮಿಸ್ಟಿಕ್ ನಂಬುಗೆಯ, ಪ್ರಕೃತಿಯನ್ನು ಆರಾಧಿಸುವ ಕೊಡವ ಯೋಧ ಕುಲಕ್ಕೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಕೊಡವ ಯೋಧ ಕುಲವನ್ನು ಭಾರತೀಯ ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಆದಿಮಸಂಜಾತ ಜನರ ಆಸ್ತಿ ಮರುಪಡೆಯುವಿಕೆ ಕಾನೂನಿನ ಅಡಿಯಲ್ಲಿ ಕೊಡವರ ವಂಶಪಾರಂಪರ್ಯ ಆಸ್ತಿಗಳನ್ನು ಮರಳಿ ಕೊಡವರಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಇತಿಹಾಸಕಾರರೊಬ್ಬರು ಕೊಡವರ ಇತಿಹಾಸವನ್ನು ತಿರುಚಿ ಕೊಡವರ ನ್ಯಾಯಯುತ ಸಾಂವಿಧಾನಿಕ ಹಕ್ಕುಗಳನ್ನು ತಡೆಯಲು ಮತ್ತು ನಿಷ್ಟ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದು, ಕೊಡವರು ಜಾಗೃತಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಟ್ಟಮಾಡ ಕುಶ, ಮಂದಪಂಡ ಮನೋಜ್ ಮಂದಣ್ಣ ಹಾಗೂ ಚೀಯಬೇರ ಸತೀಶ್ ಪಾಲ್ಗೊಂಡಿದ್ದರು.