ಯದುವೀರ್ 
ಕೊಡಗು

ಕೊಡಗಿನ ಹಕ್ಕು, ಜೀವನೋಪಾಯ ರಕ್ಷಣೆಗೆ ಬದ್ಧ

ಮಡಿಕೇರಿ:
ಡಾ. ಕೆ. ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿ ಆಧಾರಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಕರಡು ಅಧಿಸೂಚನೆಗೆ ಸಂಬAಧಿಸಿದAತೆ, ಕೊಡಗು ಜಿಲ್ಲೆಯ ಜನರ ಹಕ್ಕುಗಳು, ಜೀವನೋಪಾಯ ಹಾಗೂ ಆಸ್ತಿಪಾಸ್ತಿಗಳನ್ನು ರಕ್ಷಿಸಲು ತಾವು ಸಂಪೂರ್ಣ ಬದ್ಧರಾಗಿರುವುದಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಸಂಬAಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ನಿಟಿನಲ್ಲಿ ತಮ್ಮ ಕಚೇರಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದೆ.
ಜಿಲ್ಲೆಯ ಸ್ಥಳೀಯ ಸಮುದಾಯಗಳು, ರೈತರು, ಬೆಳೆಗಾರರು ಮತ್ತು ವಿವಿಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ವ್ಯಕ್ತಪಡಿಸಿರುವ ನ್ಯಾಯಯುತ ಆತಂಕಗಳು, ಆಕ್ಷೇಪಣೆಗಳು ಹಾಗೂ ವಾಸ್ತವಿಕ ಅಂಶಗಳನ್ನು ಕ್ರಮಬದ್ಧವಾಗಿ ದಾಖಲಿಸಿ ಕೇಂದ್ರ ಸಚಿವಾಲಯಕ್ಕೆ ತಲುಪಿಸಲಾಗುತ್ತಿದೆ.
ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಪರಸ್ಪರ ಪೂರಕವಾಗಿ ಸಾಗಬೇಕಿರುವುದು ಅತ್ಯಗತ್ಯ. ಕೊಡಗಿನ ವಿಶಿಷ್ಟ ಭೌಗೋಳಿಕ ಹಾಗೂ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಈಗಾಗಲೇ ಕೇಂದ್ರ ಸಚಿವಾಲಯದ ಗಮನಕ್ಕೆ ತರಲಾಗಿದೆ. ಹೊರಬರಲಿರುವ ಅಂತಿಮ ಅಧಿಸೂಚನೆಯಲ್ಲಿ ಕೊಡಗಿನ ಜನರ ಹಿತಾಸಕ್ತಿಗಳಿಗೆ ಯಾವುದೇ ಧಕ್ಕೆಯಾಗದಂತೆ ಸೂಕ್ತ ರಕ್ಷಣೆ ಒದಗಿಸಲು ನಾವು ಶ್ರಮಿಸುತ್ತಿದ್ದೇವೆ ಎಂದಿದ್ದಾರೆ.