ನವಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ವಿ.ಪಿ.ಶಶಿಧರ್, ಕೆ.ಕೆ.ಮಂಜುನಾಥ್, ಕೆ.ಬಿ.ಶಂಶುದ್ಧೀನ್, ಸಂತೋಷ್ ಮತ್ತಿತರರಿದ್ದರು.
ಕುಶಾಲನಗರ: ಕೂಡುಮಗಳೂರು ಗ್ರಾ.ಪಂ ನ ಕೂಡ್ಲೂರು ನವಗ್ರಾಮದ ಅಂಗನವಾಡಿ ಮುಂಭಾಗದ 25 ಲಕ್ಷ ರೂ.ಗಳ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.
ಗ್ರಾಮಸ್ಥರ ಬೇಡಿಕೆ ಮೇರೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕಾಂಗ್ರೆಸ್ ಮುಖಂಡರಾದ ಕೆ.ಕೆ.ಮಂಜುನಾಥ್, ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ಪಿಡಿಓ ಸಂತೋಷ್, ಗ್ರಾಮದ ಪ್ರಮುಖರು, ಗ್ರಾಮಸ್ಥರು ಇದ್ದರು.