ಕುಶಾಲನಗರ ಪೊಲೀಸರು ವಶಪಡಿಸಿಕೊಂಡಿರುವ ನಿಯಮಗಳನ್ನು ಉಲ್ಲಂಘಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಸಂಚರಿಸುತ್ತಿದ್ದ ಜಲ್ಲಿಕಲ್ಲು ತುಂಬಿದ ವಾಹನ 
ಕೊಡಗು

ನಿಯಮ ಮೀರಿದ ವಾಹನಗಳ ವಶ

ಸುನಿಲ್ ಪೊನ್ನೇಟಿ
ಮಡಿಕೇರಿ:
ಕುಶಾಲನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಸಂಚರಿಸುತ್ತಿದ್ದ ಜಲ್ಲಿಕಲ್ಲು ತುಂಬಿದ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಸ್.ಪಿ. ಆರ್.ಎನ್. ಬಿಂದುರಾಣಿ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ಜಲ್ಲಿಕಲ್ಲು ತುಂಬಿದ ವಾಹನಗಳು ನಿಯಮಗಳನ್ನು ಉಲ್ಲಂಘಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಸಂಚರಿಸುತ್ತಿರುವುದರಿAದ ಸಾರ್ವಜನಿಕರಿಗೆ ಮತ್ತು ಇತರ ವಾಹನಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ಸ್ವೀಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಗಣೇಶ್, ಶ್ರೀನಿವಾಸ್ ಹಾಗೂ ಸಿಬ್ಬಂದಿ ತಂಡ ಗುರುವಾರ ಕಾರ್ಯಾಚರಣೆ ನಡೆಸಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 7 ವಾಹನಗಳಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸುವ ಮೂಲಕ ನಂಬರ್ ಪ್ಲೇಟ್ ಹಾಕದೇ ಎಂ ಸ್ಯಾಂಡ್, ಜಲ್ಲಿ ಕಲ್ಲು ಸಾಗಿಸುವ ಟ್ರಾö್ಯಕ್ಟರ್‌ಗಳು, ಜಲ್ಲಿ ಕಲ್ಲು, ಎಂ ಸ್ಯಾಂಡ್ ಸಾಗಾಟ ಸಂದರ್ಭ ಸೂಕ್ತ ರೀತಿಯಲ್ಲಿ ಮುಚ್ಚದ ವಾಹನಗಳ ವಿರುದ್ಧೂ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ ಕೇಳಿಬಂದಿದೆ.