ರಾಜ್ಯದ ೨೫ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಇಂದಿರಾಗಾಂಧಿ ವೃತ್ತ ಚೌಕಿಯಲ್ಲಿ ಬುಧವಾರ ಸಂಭ್ರಮಾಚರಣೆ ನಡೆಯಿತು.
- ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ
ಮಡಿಕೇರಿ: ರಾಜ್ಯದ ೨೫ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಇಂದಿರಾಗಾಂಧಿ ವೃತ್ತ ಚೌಕಿಯಲ್ಲಿ ಬುಧವಾರ ಸಂಭ್ರಮಾಚರಣೆ ನಡೆಯಿತು.
ಕಾಂಗ್ರೆಸ್ ನಗರಾಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಘೋಷಣೆಗಳನ್ನು ಕೂಗಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಶಿಕಲಾ, ಕಾಂಗ್ರೆಸ್ ಮುಖಂಡರುಗಳಾದ ಕಲೀಲ್ ಬಾಷಾ, ಯಶ್ ದೋಲ್ಪಾಡಿ, ಫ್ಯಾನ್ಸಿ ಪಾರ್ವತಿ, ದಿನೇಶ್ ಶೆಟ್ಟಿ, ಆರ್.ಪಿ.ಚಂದ್ರಶೇಖರ್, ಮುದ್ದುರಾಜು, ರವುಫ್ ಅಹಮದ್, ಕೋಚನ ಚೇತನ್, ಪುಷ್ಪ ಪೂರ್ಣಚ್ಚ, ನಂದ, ಎಚ್.ಕೆ.ಸುಬ್ರಮಣಿ, ಜಿ.ಆರ್.ರಾಜು, ವಿ.ಕೆ.ನಜಿರ್ ಹುಸೇನ್, ಸದಾ ಮುದ್ದಪ್ಪ, ಜಗದೀಶ್ ಜಿ.ಸಿ, ಪವಿತ್ರ, ವಿಮಲಾ, ಪ್ರೇಮಾ ಹಾಗೂ ಕಾರ್ಯಕರ್ತರು ಹಾಜರಿದ್ದರು. ಸಂಭ್ರಮಾಚರಣೆಯ ನಂತರ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಿಡಿದ ಪಟಾಕಿಗಳ ತ್ಯಾಜ್ಯವನ್ನು ತೆಗೆದು ರಸ್ತೆಯನ್ನು ಸ್ವಚ್ಛಗೊಳಿಸಿದರು.