ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಪಿ.ಶಶಿಧರ್ ನೇತೃತ್ವದಲ್ಲಿ ಸೌದೆಯಿಂದ ಅಡುಗೆ ಮಾಡುವ ಪ್ರತಿಭಟನೆ ನಡೆಸಲಾಯಿತು. ಗೋವಿಂದಪ್ಪ, ಕೃಷ್ಣೇಗೌಡ, ರಮೇಶ್, ವಿ.ಎಸ್.ಆನಂದ್ ಕುಮಾರ್, ಅಬ್ದುಲ್ ರಜಾಕ್, ಟಿ.ಕೆ.ಪಾಂಡುರAಗ ಮತ್ತಿತರರು ಇದ್ದರು.
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಹಿಡಿದು, ಸಿಲಿಂಡರ್ ಚಿತ್ರ ಹಿಡಿದು ಕಾಂಗ್ರೆಸ್ ಕಚೇರಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಾಂಗ್ರೆಸ್ ಕಚೇರಿಯಿಂದ ಐಬಿ ವೃತ್ತದ ಮೂಲಕ ಬಿಎಂ ರಸ್ತೆಯಲ್ಲಿ ಸಾಗಿದ ಪ್ರತಿಭಟನಾಕಾರರು ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತೊಲಗಲಿ ಬಿಜೆಪಿ ತೊಲಗಲಿ, ಭಾರತ ಉಳಿಸಿ, ಮೋದಿ ಸರ್ಕಾರ ತೊಲಗಿಸಿ, ಅಚ್ಛೇÃದಿನ್ ಇದುವೇ ಅಚ್ಛೇದಿನ್ ಎಂಬಿತ್ಯಾದಿ ಘೋಷಣೆ ಕೂಗಲಾಯಿತು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿAದಲೂ ಜನವಿರೋಧಿ, ಸಂವಿಧಾನ ವಿರೋಧಿ, ರೈತವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ. ಅಗತ್ಯ ವಸ್ತುಗಳ ಜತೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ ಎಂದು ಪ್ರತಿಭಟನಿರತರು ಆರೋಪಿಸಿದರು. ಸರ್ಕಲ್‌ನಲ್ಲಿ ಸೌದೆ ಯಿಂದ ಅಡುಗೆ ಮಾಡುವ ಮೂಲಕ ಅಣಕು ಪ್ರದರ್ಶನ ನೀಡಿ ಮಹಿಳಾ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ವಿ.ಪಿ.ಶಶಿಧರ್ ಮಾತನಾಡಿ ಮಧ್ಯಪ್ರಾಚ್ಯ ಯುದ್ಧದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎನ್ನುತ್ತಿದ್ದ ಕೇಂದ್ರ ಸರ್ಕಾರ ಯುದ್ಧದ ನೆಪವೊಡ್ಡಿ ಅನಿಲ ಬೆಲೆಯನ್ನು ಏರಿಕೆ ಮಾಡಿದೆ.ಇದರಿಂದ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಯುದ್ಧ ನಡೆಯುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಿದ್ದರೂ ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದ ಕಾರಣ ಇಂದು ಜನಸಾಮಾನ್ಯರಿಗೆ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಈ ನಡುವೆ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಕೆಲವು ಕಡೆ ಹೆಚ್ಚು ಹಣ ಕೊಟ್ಟರೂ ಅನಿಲ ಸಿಲಿಂಡರ್ ಸಿಗದಂತಹ ಪರಿಸ್ಥಿತಿ ಎದುರಾಗಿದೆ. ಯುದ್ಧ ಹೀಗೆ ಮುಂದುವರೆದರೆ ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಾಗುವ ಆತಂಕವಿದೆ. ಇಂಧನ ದರ ಹೆಚ್ಚಿದರೆ ಸರಕು ಸಾಗಾಣಿಕೆ ವೆಚ್ಚ ಅಧಿಕವಾಗಿ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರಿಗೆ ಹೊರೆಯಾಗುತ್ತದೆ. ಇದೆಲ್ಲವೂ ಪ್ರಧಾನಿ ಮೋದಿ ಸರ್ಕಾರದ ಆಡಳಿತ ವೈಫಲ್ಯದ ಫಲ. ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗಳನ್ನು ಪರಿಹರಿಸಬೇಕು, ಇಲ್ಲವೇ ಪ್ರಧಾನಿ ಮೋದಿ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಒತ್ತಾಯಿಸಿದರು.
ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಮುಖಂಡರಾದ ಕೃಷ್ಣೇಗೌಡ, ರಮೇಶ್, ವಿ.ಎಸ್.ಆನಂದ್ ಕುಮಾರ್, ಅಬ್ದುಲ್ ರಜಾಕ್, ಟಿ.ಕೆ.ಪಾಂಡುರAಗ, ಧರಣೇಂದ್ರಕುಮಾರ್, ಎಸ್.ಎಸ್. ಶ್ರೀನಿವಾಸ್, ರಫೀಕ್, ಅಜೀಜ್, ಟಿ.ಬಿ. ಜಗದೀಶ್, ಮಲ್ಲಿಕಾರ್ಜುನ, ಶಶಿಭೀಮಯ್ಯ, ದಾಮೋದರ್, ಜಗದೀಶ್, ನಂಜುAಡಸ್ವಾಮಿ, ಸುನೀತಾ, ಪದ್ಮ, ಸರೋಜ, ಜಯಲಕ್ಷ್ಮಮ್ಮ, ಗೀತಾ ಬಸಪ್ಪ, ಪಾರ್ವತಿ ಮತ್ತಿತರರು ಪಾಲ್ಗೊಂಡಿದ್ದರು.