ಓಂ ಶಕ್ತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಎಸ್.ಸೇದು ಮಾತನಾಡಿದರು. ಖಜಾಂಚಿ ರಾಧಾಕೃಷ್ಣ, ಕಾರ್ಯದರ್ಶಿ ಕುಮಾರ್, ಸಹಕಾರ್ಯದರ್ಶಿ ಸುಬ್ರಹ್ಮಣ್ಯ ಇದ್ದರು. 
ಕೊಡಗು

ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲಿ

ಕಿರಣ್ ಗೌಡ.ಜಿ
ವಿರಾಜಪೇಟೆ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳುವುದರೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಓಂಶಕ್ತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಎಸ್.ಸೇದು ಹೇಳಿದರು.
ಓಂ ಶಕ್ತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಟ್ಟಣದ ಪುರಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳು ಮೊದಲಿಗೆ ತ್ರಿಪುರಂ, ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿದ್ದು ನಂತರ 2007ರಲ್ಲಿ ಹೋರಾಟದ ನಂತರ ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಸೌಲಭ್ಯಗಳು ದೊರಕುತ್ತಿದ್ದು ಇದನ್ನು ಕಟ್ಟಡ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು. ನಿಟ್ಟಿನಲ್ಲಿ ತಮ್ಮ ಗುರುತಿನ ಚೀಟಿಯನ್ನು ನೊಂದಾಯಿಸಿಕೊಂಡು ಸಂಘಟನೆಯನ್ನು ಬಲಪಡಿಸುವ ಮೂಲಕ ಒಗ್ಗಟ್ಟಿನಿಂದ ಫಲಾನುಭವಿಗಳು ಸಿಗುವಂತ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ನೋಂದಾಯಿತ ಕಾರ್ಮಿಕ ಫಲಾನುಭವಿಯು ಕಟ್ಟಡ ಕಾಮಗಾರಿ ಸಂದರ್ಭ ಅಪಘಾತವಾದಲ್ಲಿ ,ಅಂಗವಿಕಲತೆ ಹೊಂದಿದ್ದರೆ ಮಾಸಿಕ 2 ಸಾವಿರ ರೂ. ಪಿಂಚಣಿ ಹಾಗೂ ಮೂರು ವರ್ಷ ಸದಸ್ಯತ್ವದೊಂದಿಗೆ 64 ವರ್ಷದ ಫಲಾನುಭವಿಗಳಿಗೆ ಮಾಸಿಕ ಪಿಂಚಣಿ ಸೌಲಭ್ಯ 3 ಸಾವಿರ ರೂ. ಅನ್ನು ಸರ್ಕಾರದ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುತ್ತದೆ. ನೋಂದಾಯಿತ ಕಾರ್ಮಿಕ ಸದಸ್ಯರ ಮಕ್ಕಳು ವಿದ್ಯಾರ್ಥಿವೇತನ ಹಾಗೂ ಇತರ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಓಂ ಶಕ್ತಿ ಸಂಘಟನೆಯ ಸಂಚಾಲಕಿ ಅನುಪಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದರು. ವೇದಿಕೆಯಲ್ಲಿ ಖಜಾಂಚಿ ರಾಧಾಕೃಷ್ಣ, ಕಾರ್ಯದರ್ಶಿ ಕುಮಾರ್, ಸಹಕಾರ್ಯದರ್ಶಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.