ಮೂರ್ನಾಡು ಪದವಿ ಪೂರ್ವ ಕಾಲೇಜಿನ 2026-27ನೇ ಶೈಕ್ಷಣಿಕ ವರ್ಷದ ಮೊದಲ ಪಾಲಕರ, ಉಪನ್ಯಾಸಕರ ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಿ.ಎಂ.ದೇವಕಿ, ಡಾ.ಜಗತ್ ತಿಮ್ಮಯ್ಯ, ವೇಣು ಅಪ್ಪಣ್ಣ, ಯತೀಶ್, ಹರೀಶ್ ದೇವಯ್ಯ ಇತರರು ಇದ್ದರು.
- ಪ್ರಾಂಶುಪಾಲೆ ಪಿ.ಎಂ.ದೇವಕಿ ಸಲಹೆ
ನಾಪೋಕ್ಲು: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಉಪನ್ಯಾಸಕರೊಂದಿಗೆ ಪಾಲಕರೂ ಸಮಾನವಾಗಿ ಕೈಜೋಡಿಸಬೇಕೆಂದು ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ.ದೇವಕಿ ಸಲಹೆ ನೀಡಿದರು.
ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ 2026-27ನೇ ಶೈಕ್ಷಣಿಕ ವರ್ಷದ ಮೊದಲ ಪಾಲಕರ, ಉಪನ್ಯಾಸಕರ ಸಭೆಯಲ್ಲಿ ಮಾತನಾಡಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಜಗತ್ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಂಡರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಕಿವಿಮಾತು ಹೇಳಿದರು.
ವಿದ್ಯಾಸಂಸ್ಥೆ ಕಾರ್ಯದರ್ಶಿ ವೇಣು ಅಪ್ಪಣ್ಣ ಮಾತನಾಡಿ, ಪಾಲಕರು ಮಕ್ಕಳೊಂದಿಗೆ ಕೇವಲ ಸಂಪರ್ಕ ಮಾತ್ರವಲ್ಲ, ಸಂಬಂಧವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
2025-26ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 16 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಖಜಾಂಚಿ ಯತೀಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಲು ಕರೆ ನೀಡಿದರು. ನಿರ್ದೇಶಕ ಹರೀಶ್ ದೇವಯ್ಯ, ಸರೋಜಿನಿ, ರೋಹಿಣಿ, ಸೌಮಿನಿ ಇತರರು ಇದ್ದರು.