ಸೋಮವಾರಪೇಟೆ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆದ ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕೃಷ್ಣಮೂರ್ತಿ, ಆದಂ, ಪರಮೇಶ ಕುಮಾರ್, ಕೃಷ್ಣಪ್ಪ ಇದ್ದರು.
- ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಕರೆ
ಸ್ವಾತಂತ್ರೃಕ್ಕಾಗಿ ಪೂರ್ವಜರು ಮಾಡಿದ ತ್ಯಾಗ, ಹೋರಾಟ ಹಾಗೂ ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಮೂಲಕ ಮುಂದಿನ ಪೀಳಿಗೆಗೆ ಬಲಿಷ್ಠ ಹಾಗೂ ಭವ್ಯ ಭಾರತ ನಿರ್ಮಿಸಬೇಕು ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಮಾನ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಮ ಸಮಾಜ ನಿರ್ಮಾಣದ ಆಶಯಗಳು ಸಾಕಾರಗೊಂಡಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ದೊರೆಯುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವು ಕೇವಲ ಪುಸ್ತಕವಲ್ಲ. ದೇಶದ ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರೃ, ನ್ಯಾಯ ಹಾಗೂ ಸಹೋದರತ್ವದ ಹಕ್ಕುಗಳನ್ನು ರಕ್ಷಿಸುವ ಮಹತ್ವದ ಮಾರ್ಗದರ್ಶಿಯಾಗಿದೆ ಎಂದರು.
ಶನಿವಾರಸಂತೆ ಸುಪ್ರಜಾ ಗುರುಕುಲ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಿ.ಸುಜಲಾ ದೇವಿ, ಮಾಜಿ ಸೈನಿಕರು, ಅಂತಾರಾಷ್ಟ್ರೀಯ ಮಿಕ್ಸ್ ಬಾಕ್ಸಿಂಗ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ತಾಲೂಕಿನ ವಿದ್ಯಾರ್ಥಿಗಳು, ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ಸಿಬ್ಬಂದಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಇಲಾಖಾ ನೌಕರರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.